ಕಾಶ್ಮೀರ ಎನ್ಕೌಂಟರ್: ನಾಲ್ವರು ಭಯೋತ್ಪಾದಕರ ಹತ್ಯೆ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಗುರುವಾರ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಭೀಕರ ಗುಂಡಿನ ಚಕಮಕಿ ನಡೆದಿದೆ. ಭಯೋತ್ಪಾದಕರ ಚಲನವಲನದ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು, ಪೊಲೀಸರೊಂದಿಗೆ ಜಂಟಿಯಾಗಿ ಸಿಂಗಾಪೊರ ಪ್ರದೇಶದಲ್ಲಿ ಸುತ್ತುವರಿದು ಶೋಧ ಕಾರ್ಯಾಚರಣೆ ನಡೆಸಿದವು.

ಗುಂಡಿನ ಚಕಮಕಿಯಲ್ಲಿ ನಾಲ್ವರು ಭಯೋತ್ಪಾದಕರು ಭದ್ರತಾ ಪಡೆಗಳಿಂದ ಹತರಾದರು ಮತ್ತು ಒಬ್ಬ ಸೈನಿಕ ಸಾವನ್ನಪ್ಪಿದ್ದಾನೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ‘ಆಪರೇಷನ್ ಸಿಂಧೂರ್’ ನಡೆಸುತ್ತಿರುವಾಗ, ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಸುಮಾರು 45-50 ಭಯೋತ್ಪಾದಕರು ಒಳನುಸುಳುವಿಕೆಗೆ ಯತ್ನಿಸಿದ್ದಾರೆ ಎಂದು ಬಿಎಸ್‌ಎಫ್ ಡಿಐಜಿ ಎಸ್‌ಎಸ್ ಮಾಂಡ್ ಗುರುವಾರ ಬಹಿರಂಗಪಡಿಸಿದ್ದಾರೆ.

ಭಾರತೀಯ ಪಡೆಗಳು ಗುಂಡುಗಳ ಮಳೆ ಸುರಿಸಿದ ನಂತರ ಅವರು ಪಾಕಿಸ್ತಾನಕ್ಕೆ ಪಲಾಯನ ಮಾಡಿದರು ಎಂದು ಅವರು ಹೇಳಿದರು.

Related Articles

ಇತ್ತೀಚಿನ ಸುದ್ದಿಗಳು