ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಕೇಂದ್ರಗಳಿಗೆ ಸಂಬಂಧಿಸಿದಂತೆ ಹಲವು ಉಪಕರಣಗಳ ಖರೀದಿಗೆ ಅನುಮೋದನೆ ನೀಡಲಾಗಿದೆ. 2024-25ನೇ ಸಾಲಿನಲ್ಲಿ ಕಾರ್ಯಕ್ರಮಗಳಡಿ 15 ವಿವಿಧ ಹಣಕಾಸು ಆಯೋಗದ ಅನುದಾನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೋಗ ಪತ್ತೆ ಮೂಲ ಸೌಕರ್ಯಗಳನ್ನು ಒದಗಿಸಲು ಈ ಕ್ರಮವನ್ನು ಕೈಗೊಳ್ಳಲಾಗಿದೆ
2024-25ನೇ ಸಾಲಿನಲ್ಲಿ ಕಾರ್ಯಕ್ರಮಗಳಡಿ 15 ವಿವಿಧ ಹಣಕಾಸು ಆಯೋಗದ ಅನುದಾನದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ರೋಗ ಪತ್ತೆ ಮೂಲ ಸೌಕರ್ಯಗಳನ್ನು ಒದಗಿಸಲು ರೂ. 145.99 ಕೋಟಿಗಳಲ್ಲಿ ಉಪಕರಣಗಳನ್ನು ಖರೀದಿಸಲು ತೀರ್ಮಾನಿಸಲಾಗಿದೆ. ಜೊತೆಗೆ ರೂ. 84.88 ಕೋಟಿಗಳ ಅಂದಾಜು ಮೊತ್ತದಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಗರ ಆರೋಗ್ಯ ಕ್ಷೇಮ ಕೇಂದ್ರ – ನಮ್ಮ ಕ್ಲಿನಿಕ್ ಗಳಲ್ಲಿನ ಪ್ರಯೋಗಾಲಯಗಳನ್ನು ಮತ್ತು ಆರೋಗ್ಯ ಸೇವೆಗಳನ್ನು ಬಲಪಡಿಸಲು ಉಪಕರಣಗಳನ್ನು ಖರೀದಿಸಲು ಹಾಗೂ 5 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು ಸಭೆ ನಿರ್ಧರಿಸಿದೆ. ಇದರೊಂದಿಗೆ ರೂ. 72.96 ಕೋಟಿಗಳ ಅಂದಾಜು ಮೊತ್ತದಲ್ಲಿ ನಮ್ಮ ಕ್ಲಿನಿಕ್‌ಗಳಿಗೆ ಅಗತ್ಯವಿರುವ ಔಷಧಿ ಮತ್ತು ರಾಸಾಯನಿಕಗಳನ್ನು PM- ABHIM ಅನುದಾನದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
PM- ABHIM ಯೋಜನೆಯಡಿಯಲ್ಲಿ ಚಿಕ್ಕಬಳ್ಳಾಪುರದ CIMS , ಇಲ್ಲಿಗೆ ಅನುಮೋದನೆಯಾಗಿರುವ 50 ಹಾಸಿಗೆ ತೀವ್ರ ನಿಗಾ ಆರೈಕೆ ಘಟಕವನ್ನು ಜಿಲ್ಲೆಯ ಚಿಂತಾಮಣಿ ತಾಲ್ಲೂಕಿಗೆ ಸ್ಥಳಾಂತರಿಸಿ 16.63 ಕೋಟಿ ವೆಚ್ಚಲದಲಿ ನಿರ್ಮಿಸಲು ಆದೇಶಕ್ಕೆ ಘಟನೋತ್ತರ ಅನುಮೋದನೆ ನೀಡಲಾಗಿದೆ.
PM- ABHIM ಯೋಜನೆಯಡಿಯಲ್ಲಿ 108.36 ಕೋಟಿ ರೂ ವೆಚ್ಚದಲ್ಲಿ ಒಟ್ಟು 254 ನಗರ ಆರೋಗ್ಯ ಕ್ಷೇಮಕೇಂದ್ರ – ನಮ್ಮ ಕ್ಲಿನಿಕ್ ಗಳನ್ನು ಉಪಕರಣಗಳೊಂದಿಗೆ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.