Monday, February 23, 2026

ಸತ್ಯ | ನ್ಯಾಯ |ಧರ್ಮ

ಸರ್ಕಾರಿ ಅಧಿಕಾರಿಗಳ ಎಂದು ಎಂಟ್ರಿ ಕೊಟ್ಟು 24 ಲಕ್ಷದೊಂದಿಗೆ ಎಸ್ಕೇಪ್

ಬೆಂಗಳೂರು‌ : ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ‌ (ACB) ಅಧಿಕಾರಿಗಳ ಸೋಗಿನಲ್ಲಿ ಎಂಟ್ರಿಕೊಟ್ಟ ಖದೀಮರು 24 ಲಕ್ಷ ರೂ. ಹಣವನ್ನ (Money) ದೋಚಿ (Robbery) ಎಸ್ಕೇಪ್ ಆಗಿರುವ ಘಟನೆ ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಹೊರವಲಯದ ಪ್ರಸನ್ನಹಳ್ಳಿ ರಸ್ತೆಯಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 12 ಮಂದಿಯ ಪೈಕಿ 9 ಮಂದಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೃಷ್ಣಕುಮಾರ್, ವೇಣುಗೋಪಾಲ್, ಸಂಪಂಗಿ ರಾಮ, ಅಹಮದ್, ನಾರಾಯಣಸ್ವಾಮಿ, ವೆಂಕಟೇಶ, ಮುರುಗೇಶನ್, ಶಿವ, ಲತೀಪ್ ಎಂದು ಗುರುತಿಸಲಾಗಿದೆ. ಇವರಿಂದ ಹಣವನ್ನು ಜಪ್ತಿ ಮಾಡಲಾಗಿದೆ.

ಘಟನೆ ವಿವರ: ಶಂಕರಪ್ಪ ಎಂಬವರಿಗೆ ಹಣ ತ್ರಿಬಲ್ ಮಾಡಿಕೊಡುವುದಾಗಿ ಹೇಳಿ ಎ1 ಆರೋಪಿ ಕೃಷ್ಣ ಕುಮಾರ್​​​ ಫೋನ್​ ಮಾಡಿ ಕರೆಸಿಕೊಂಡಿದ್ದಾನೆ. ಅದರಂತೆ ಶಂಕರಪ್ಪ ಚಿನ್ನಾಭರಣ ಅಡವಿಟ್ಟು 24 ಲಕ್ಷ ರೂ ಹಣವನ್ನು ತಂದಿದ್ದಾರೆ. ಇತ್ತ ಮೊದಲೇ ಮಾಡಿಕೊಂಡಿದ್ದ ಪ್ಲ್ಯಾನ್​​ನಂತೆ ಖಾಸಗಿ ಕಾರಿನಲ್ಲಿ ಕೃಷ್ಣ ಕುಮಾರ್ ಸಹಚರರು ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ‌ ಹೆಸರಿನಲ್ಲಿ ಖಾಸಗಿ‌ ಕಾರ್​​ಗೆ ಬೋರ್ಡ್ ಹಾಕಿಕೊಂಡು ಅಧಿಕಾರಿಗಳ ಸೋಗಿನಲ್ಲಿ ಬಂದು 24 ಲಕ್ಷ ರೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಹಣ ಎಗರಿಸಿದ ನಂತರ ಎ1 ಆರೋಪಿ ಕೃಷ್ಣಕುಮಾರ್​​ ಪೊಲೀಸ್ ಠಾಣೆಗೆ ಬಂದು ತಾನೇ ದೂರು ನೀಡಿದ್ದ. ಪೊಲೀಸರ ವಿಚಾರಣೆ ವೇಳೆ ದೂರು‌ ನೀಡಿದ್ದ ಆರೋಪಿಯೇ ದರೋಡೆಕೋರ ಎನ್ನುವುದು ಬಯಲಾಗಿದೆ. ಸದ್ಯ ದೇವನಹಳ್ಳಿ ಠಾಣೆಯ ಪೊಲೀಸರು 12 ಮಂದಿಯಲ್ಲಿ 9 ಆರೋಪಿಗಳನ್ನ ಬಂಧಿಸಿದ್ದಾರೆ.

ಕೆನರಾ ಬ್ಯಾಂಕ್​ನಲ್ಲಿ ಕಳ್ಳತನಕ್ಕೆ ಯತ್ನ: ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಪ್ರತಿಷ್ಠಿತ ಕೆನರಾ ಬ್ಯಾಂಕ್​​ನಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಸೈರನ್ ಆಗುತ್ತಿದ್ದಂತೆ ಕಳ್ಳ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಶೇಷಾದ್ರಿಪುರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ರಾತ್ರಿ ಬ್ಯಾಂಕ್ ಹಿಂಬದಿ ಇದ್ದ ಗ್ರಿಲ್ ಕಟ್ ಮಾಡಿ ಒಳ ನುಗ್ಗಿರುವ ಕಳ್ಳ, ಪೂರ್ತಿ ಬ್ಯಾಂಕ್ ಸರ್ಚ್ ಮಾಡಿದ್ದಾನೆ. ಸ್ಟ್ರಾಂಗ್ ರೂಮ್ ಹತ್ತಿರ ಹೋಗಿ ವೈರ್ ಕಟ್ ಮಾಡಿದ್ದು, ವೈರ್ ಕಟ್ ಮಾಡುತ್ತಿದಂತೆ ಸೈರನ್ ಆನ್ ಆಗಿದೆ. ಬಳಿಕ ಅಲ್ಲಿಂದ ಕಳ್ಳ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page