Wednesday, May 1, 2024

ಸತ್ಯ | ನ್ಯಾಯ |ಧರ್ಮ

ಈಶ್ವರಪ್ಪ ಪುತ್ರ ಕಾಂತೇಶ್ ಗೂ ತಟ್ಟಿದ ಸಿಡಿ ಬಿಸಿ : ಕೋರ್ಟ್ ನಿಂದ ನಿರ್ಬಂಧಕಾಜ್ಞೆ ಜಾರಿ

ಹಾಸನದಲ್ಲಿ ಪ್ರಜ್ವಲ್ ರೇವಣ್ಣನ ಅಶ್ಲೀಲ ಪೆನ್ ಡ್ರೈವ್ ಪ್ರಕರಣದ ನಂತರ ಈಗ ಶಿವಮೊಗ್ಗದಲ್ಲಿ ಈಶ್ವರಪ್ಪ ಪುತ್ರ ಕಾಂತೇಶ್ ಗೂ ಅದರ ಬಿಸಿ ಮುಟ್ಟಿದ್ದು, ತನ್ನ ವಿರುದ್ಧವಾಗಿ ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡುವಂತಿಲ್ಲ ಎಂದು ಮಾಧ್ಯಮಗಳಿಗೆ ಕೋರ್ಟ್ ನಿಂದ ನಿರ್ಬಂಧಕಾಜ್ಞೆ ಜಾರಿ ಮಾಡಿಸಿದ್ದಾರೆ.

ಈಶ್ವರಪ್ಪ ಪುತ್ರ ಕಾಂತೇಶ್ ಅವರು ಈ ಬಾರಿ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಹೈಕಮಾಂಡ್​ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ. ಇದರಿಂದ ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ ಯಡಿಯೂರಪ್ಪ ಹಾಗೂ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ಕುಟುಂಬ ರಾಜಕಾರಣವನ್ನು ಕೊನೆಗಾಣಿಸಬೇಕೆಂದು ಶಿವಮೊಗ್ಗದಲ್ಲಿ ಬಿಎಸ್​ವೈ ಪುತ್ರ ರಾಘವೇಂದ್ರ ವಿರುದ್ಧ ಸ್ಪರ್ಧೆಗಿಳಿದಿದ್ದಾರೆ.

ಕಾಂತೇಶ್ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಭಾವ ಹೊಂದಿರುವ ರಾಜಕಾರಣಿಯಾಗಿದ್ದು, ತನ್ನ ತಂದೆ ಈಶ್ವರಪ್ಪನವರ ಬಹುತೇಕ ರಾಜಕೀಯ ಚಟುವಟಿಕೆಗಳಲ್ಲಿ ತನ್ನ ಪಾತ್ರ ಮೆರೆದಿದ್ದಾರೆ. ಅಷ್ಟೇ ಅಲ್ಲದೇ ಶಿವಮೊಗ್ಗ ಕ್ಷೇತ್ರದಲ್ಲಿ ಈಶ್ವರಪ್ಪನವರ ಉತ್ತರಾಧಿಕಾರಿ ಎಂದೇ ಬಿಂಬಿತವಾಗಿರುವ ಕಾಂತೇಶ್ ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲೇ ಸ್ಪರ್ಧೆಯ ಆಕಾಂಕ್ಷಿಗಳ ಸಾಲಿನಲ್ಲಿದ್ದರು.

ಸಧ್ಯ ಸಿಡಿ ಬಿಸಿ ಅವರಿಗೂ ತಟ್ಟಿದ್ದು, ಕೋರ್ಟ್ ನಿಂದ ತಂದ ನಿರ್ಬಂಧಕಾಜ್ಞೆ ನಂತರ ಶಿವಮೊಗ್ಗ ಭಾಗದಲ್ಲಿ ಕಾಂತೇಶ್ ಬಗ್ಗೆ ಗುಸುಗುಸು ಮಾತುಗಳು ಶುರುವಾಗಿವೆ. ಈಗಾಗಲೇ ತನ್ನ ತಂದೆಯ ಲೋಕಸಭಾ ಚುನಾವಣೆ ಸ್ಪರ್ಧೆಯ ಗಡಿಬಿಡಿಯಲ್ಲೇ ಇರುವಾಗಲೇ ಕಾಂತೇಶ್ ಸಿಡಿ ಭಯಕ್ಕೆ ಹೆದರಿ ನಿರ್ಬಂಧಕಾಜ್ಞೆ ತಂದಿರುವುದು ಈಶ್ವರಪ್ಪ ಅವರ ಸ್ಪರ್ಧೆಗೆ ಎಷ್ಟು ಮುಳುವಾಗಬಹುದೇ ಎಂಬುದನ್ನು ಕಾದು ನೋಡಬೇಕಿದೆ.

Related Articles

ಇತ್ತೀಚಿನ ಸುದ್ದಿಗಳು