Friday, January 16, 2026

ಸತ್ಯ | ನ್ಯಾಯ |ಧರ್ಮ

ನನ್ನ ಕುತ್ತಿಗೆ ಕೊಯ್ದರೂ ಹಿಂದುತ್ವ ಮತ್ತು ಬಿಜೆಪಿ ಸಿದ್ಧಾಂತ ಬಿಟ್ಟು ಬೇರೆ ಕಡೆ ಹೋಗುವುದಿಲ್ಲ: ಕೆ.ಎಸ್. ಈಶ್ವರಪ್ಪ

ದಾವಣಗೆರೆಯ ಹರಿಹರದಲ್ಲಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ತಮಗೆ ಬಿಜೆಪಿಗೆ ಮರಳುವ ಮನಸ್ಸಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಕಾರ್ಯಕರ್ತರಿಂದಲೂ ಈ ಬಗ್ಗೆ ಒತ್ತಾಯವಿದ್ದು, “ನನ್ನ ಕುತ್ತಿಗೆ ಕೊಯ್ದರೂ ಹಿಂದುತ್ವ ಮತ್ತು ಬಿಜೆಪಿ ಸಿದ್ಧಾಂತ ಬಿಟ್ಟು ಬೇರೆ ಕಡೆ ಹೋಗುವುದಿಲ್ಲ,” ಎಂದು ಅವರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. ಪಕ್ಷದಲ್ಲಿ ಪರಿವರ್ತನೆ ತರುವ ಉದ್ದೇಶದಿಂದ ತಾವು ಹೊರಬಂದಿದ್ದಾಗಿ ಹೇಳಿದ ಅವರು, ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಬದಲಾವಣೆಯಾಗುವ ವಿಶ್ವಾಸ ವ್ಯಕ್ತಪಡಿಸಿದರು. ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೂ ಪಕ್ಷಕ್ಕೆ ಮರಳುವ ಮನಸ್ಸಿದೆ ಎಂದು ಅವರು ತಿಳಿಸಿದರು.

ಇದೇ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ರಾಜ್ಯದಲ್ಲಿ ಸಾಮಾನ್ಯ ಮಹಿಳೆಯರಿಗಷ್ಟೇ ಅಲ್ಲ, ಮಹಿಳಾ ಅಧಿಕಾರಿಗಳಿಗೂ ರಕ್ಷಣೆ ಇಲ್ಲದಂತಾಗಿದೆ ಎಂದು ಆರೋಪಿಸಿದರು. ಮಹಿಳಾ ಅಧಿಕಾರಿಯೊಬ್ಬರಿಗೆ ಕಾಂಗ್ರೆಸ್ ಮುಖಂಡ ಬೆದರಿಕೆ ಹಾಕಿದ ಪ್ರಕರಣವನ್ನು ಗೃಹ ಸಚಿವರು ಹಗುರವಾಗಿ ಪರಿಗಣಿಸುತ್ತಿದ್ದಾರೆ ಎಂದು ಟೀಕಿಸಿದ ಅವರು, ಅಧಿಕಾರದ ಮದದಿಂದ ಕಾಂಗ್ರೆಸ್ ವರ್ತಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page