Thursday, June 13, 2024

ಸತ್ಯ | ನ್ಯಾಯ |ಧರ್ಮ

ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಗೊತ್ತಿರುವ ವಿಚಾರ, ಈ ಬಗ್ಗೆ ದಾಖಲೆಗಳಿವೆ: ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಏ.11: “ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ಗೊತ್ತಿರುವ ವಿಚಾರ, ಈ ಬಗ್ಗೆ ದಾಖಲೆಗಳಿವೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ರಾಜರಾಜೇಶ್ವರಿ ನಗರದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು.

ಕುಮಾರಸ್ವಾಮಿ ಅವರು ನಿರ್ಮಲಾನಂದ ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿದ್ದರು ಎಂಬ ಸಚಿವ ಚೆಲುವರಾಯಸ್ವಾಮಿ ಅವರ ಹೇಳಿಕೆ ವಿಚಾರವಾಗಿ ಪ್ರಶ್ನೆ ಕೇಳಿದಾಗ ಅವರು ಉತ್ತರಿಸಿದ್ದು ಹೀಗೆ;

“ಇದು ಗೊತ್ತಿರುವ ವಿಚಾರವೇ. ಈ ಬಗ್ಗೆ ಮಾತನಾಡಲು ನೋವಾಗುತ್ತದೆ. ಈ ವಿಚಾರವಾಗಿ ಎಲ್ಲಾ ದಾಖಲೆಗಳು ಇವೆ. ಆದರೂ ಈ ವಿಚಾರವನ್ನು ಈಗ ಮಾತನಾಡುವುದು ಸೂಕ್ತವಲ್ಲ, ಮುಂದೆ ಮಾತನಾಡುತ್ತೇನೆ” ಎಂದು ಡಿಸಿಎಂ ಉತ್ತರಿಸಿದರು.

Related Articles

ಇತ್ತೀಚಿನ ಸುದ್ದಿಗಳು