Home ಬ್ರೇಕಿಂಗ್ ಸುದ್ದಿ ಪ್ರತಾಪ ಸಿಂಹನನ್ನು ಗಡಿಪಾರು ಮಾಡಿ – ದಲಿತ ಸಂಘಟನೆಗಳ ಆಗ್ರಹ

ಪ್ರತಾಪ ಸಿಂಹನನ್ನು ಗಡಿಪಾರು ಮಾಡಿ – ದಲಿತ ಸಂಘಟನೆಗಳ ಆಗ್ರಹ

0

ಹಾಸನ: ಟಿ.ನರಸೀಪುರ ಗಣೇಶ ಮೆರವಣಿಗೆ ವಿವಾದವನ್ನು ರಾಜಕೀಯ ಹಿತಾಸಕ್ತಿಗೆ ಬಳಸಿಕೊಂಡು ಸಮಾಜದಲ್ಲಿ ದ್ವೇಷ ಹಾಗೂ ಅಶಾಂತಿ ಮೂಡಿಸುತ್ತಿದ್ದಾರೆ ಎಂದು ಆರೋಪಿಸಿ ಮಾಜಿ ಸಂಸದ ಪ್ರತಾಪ ಸಿಂಹ ಅವರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಮಾತನಾಡಿ, ಧಾರ್ಮಿಕ ಕಾರ್ಯಕ್ರಮಗಳು ಸಮಾಜದ ಎಲ್ಲ ವರ್ಗದ ಜನರನ್ನು ಒಗ್ಗೂಡಿಸುವಂತಿರಬೇಕು. ಆದರೆ ಪ್ರತಾಪ ಸಿಂಹ ಅವರು ಒಂದು ಧರ್ಮ ಹಾಗೂ ಜಾತಿಯನ್ನು ಗುರಿಯಾಗಿಸಿಕೊಂಡು ಹೇಳಿಕೆಗಳನ್ನು ನೀಡುವ ಮೂಲಕ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಳೆದ 52 ವರ್ಷಗಳಿಂದ ಸಂವಿಧಾನದ ಆಶಯದಂತೆ ದೀನದಲಿತರ ಪರ ಹೋರಾಟ ನಡೆಸುತ್ತಿದೆ. ಇಂತಹ ಸಂಘಟನೆಯ ಕಾರ್ಯಕರ್ತರನ್ನು ಅವಹೇಳನಕಾರಿಯಾಗಿ ನಿಂದಿಸಿರುವುದು ಹಾಗೂ ಕಾರ್ಯಕರ್ತರು ಧರಿಸುವ ನೀಲಿ ಶಾಲಿನ ಕುರಿತು ವ್ಯಂಗ್ಯವಾಗಿ ಮಾತನಾಡಿರುವುದು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೂ ಅವಮಾನ ಮಾಡಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಾಪ ಸಿಂಹ ವಿರುದ್ಧ ಕಳೆದ ಐದಾರು ವರ್ಷಗಳಲ್ಲಿ ದ್ವೇಷ ಭಾಷಣ ಸೇರಿದಂತೆ ಸುಮಾರು 22 ಪ್ರಕರಣಗಳು ದಾಖಲಾಗಿವೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸಮಾಜದ ಶಾಂತಿ ಮತ್ತು ಸೌಹಾರ್ದತೆ ಕಾಪಾಡುವ ದೃಷ್ಟಿಯಿಂದ ಅವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಗಡಿಪಾರು ಮಾಡಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ಕೃಷ್ಣದಾಸ್, ಸಂದೇಶ್, ಆರ್‌ಪಿಐನ ಸತೀಶ್, ಈರೇಶ್, ರಾಜೇಶ್, ಕುಮಾರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

You cannot copy content of this page

Exit mobile version