Home ಆರೋಗ್ಯ ಹೃದಯಾಘಾತದ ಸಾವಿನ ಪ್ರಕರಣಗಳ ಬಗ್ಗೆ ತಜ್ಞರ ಸಮಿತಿಯಿಂದ ಆರೋಗ್ಯ ಇಲಾಖೆಗೆ ವರದಿ ಸಲ್ಲಿಕೆ ; ವರದಿಯಲ್ಲಿನ...

ಹೃದಯಾಘಾತದ ಸಾವಿನ ಪ್ರಕರಣಗಳ ಬಗ್ಗೆ ತಜ್ಞರ ಸಮಿತಿಯಿಂದ ಆರೋಗ್ಯ ಇಲಾಖೆಗೆ ವರದಿ ಸಲ್ಲಿಕೆ ; ವರದಿಯಲ್ಲಿನ ಪ್ರಮುಖ ಅಂಶಗಳಿವು

0

ರಾಜ್ಯದಲ್ಲಿ ಹೃದಯಾಘಾತದ ಸಾವಿನ ಪ್ರಕರಣ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ರಚಿಸಿದ ತಜ್ಞರ ಸಮಿತಿ ಇಲಾಖೆಗೆ ಪ್ರಾಥಮಿಕ ವರದಿ ಸಲ್ಲಿಸಿದೆ. ಆರೋಗ್ಯ ಇಲಾಖೆಯ ಟೆಕ್ನಿಕಲ್ ಕಮಿಟಿ ಈ ಬಗ್ಗೆ ವರದಿ ಸಿದ್ಧಪಡಿಸಿ ಹಲವು ಅಂಶಗಳ ಬಗ್ಗೆ ಮಾಹಿತಿ ನೀಡಿದೆ.

ರಾಜ್ಯದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಟೆಕ್ನಿಕಲ್ ಕಮಿಟಿಯ ವರದಿಯ ಅಂಶಗಳನ್ನು ಚರ್ಚಿಸಲಾಗಿದೆ. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರ ನಾಥ್ ತಂಡದಿಂದ ಸರ್ಕಾರಕ್ಕೆ ಮಹತ್ವದ ಅಧ್ಯಯನ ವರದಿ ಸಲ್ಲಿಸಿ ಪ್ರಮುಖ ವಿಚಾರಗಳ ಬಗ್ಗೆ ಚರ್ಚಿಸಿದೆ.

ತಾಂತ್ರಿಕ ಸಲಹಾ ಸಮಿತಿಯು ವರದಿಯಲ್ಲಿ ಪ್ರಮುಖ ಅಂಶಗಳನ್ನು ಉಲ್ಲೇಖಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಸಲ್ಲಿಸಿದಂತ ವರದಿಯಲ್ಲಿ ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 251 ರೋಗಿಗಳಲ್ಲಿ 87 ಮಂದಿಗೆ ಮಧುಮೇಹ ಕಾಯಿಲೆ, 102 ರೋಗಿಗಳಿಗೆ ರಕ್ತದೊತ್ತಡ, 35 ಮಂದಿಗೆ ಕೊಲೆಸ್ಟ್ರಾಲ್ ಮತ್ತು 40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇರುವುದನ್ನು ಪತ್ತೆ ಹಚ್ಚಿದೆ.

ದೇಹದೊಳಗಿನ ರೋಗಗಳ ಹೊರತಾಗಿ 251 ಮಂದಿಯಲ್ಲಿ 111 ಜನರು ಧೂಮಪಾನಿಗಳಾಗಿದ್ದಾರೆ. 19 ಮಂದಿಗೆ ಕೋವಿಡ್ ಹಿಸ್ಟರಿ ಇದೆ. 77 ಮಂದಿಗೆ ಯಾವುದೇ ರೋಗಗಳು ಇರಲಿಲ್ಲ. 30 ವರ್ಷಕ್ಕಿಂತ ಕಡಿಮೆ ವಯಸ್ಸಿನ 12 ಹೃದ್ರೋಗಿಗಳ ಬಗ್ಗೆ ಅಧ್ಯಯನ ಕೂಡ ಮಾಡಲಾಗಿದೆ.

31 ರಿಂದ 40 ವಯಸ್ಸಿನ 66 ಹೃದ್ರೋಗಿಗಳ ಬಗ್ಗೆ ಅಧ್ಯಯನ ಕೈಗೊಳ್ಳಲಾಗಿದೆ. 41ರಿಂದ 45 ವಯಸ್ಸಿನ 172 ಹೃದ್ರೋಗಿಗಳ ಬಗ್ಗೆ ಕೂಡ ಅಧ್ಯಯನವನ್ನು ತಾಂತ್ರಿಕ ಸಲಹಾ ಸಮಿತಿ ನಡೆಸಿದೆ.

You cannot copy content of this page

Exit mobile version