ಶಿವಕಾಸಿ: ತಮಿಳುನಾಡಿನ ಶಿವಕಾಸಿ ಪಟ್ಟಣದ ಬಳಿಯ ಪಟಾಕಿ ತಯಾರಿಕಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಆರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಇತರ ಐವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅವರಲ್ಲಿ ಮೂವರು ಗಂಭೀರ ಸ್ಥಿತಿಯಲ್ಲಿದ್ದಾರೆ. ಚಿನ್ನಕಾಮನ್ ಪಟ್ಟಿ ಗ್ರಾಮದ ಗೋಖಲೆಸ್ ಪಟಾಕಿ ತಯಾರಿಕಾ ಘಟಕದಲ್ಲಿ ಮಂಗಳವಾರ ಬೆಳಿಗ್ಗೆ 8:45 ಕ್ಕೆ ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಸ್ಫೋಟದಿಂದಾಗಿ ಕೇಂದ್ರದಲ್ಲಿದ್ದ ಎಂಟು ಶೆಡ್‌ಗಳು ಪೂರ್ತಿಯಾಗಿ ಸುಟ್ಟುಹೋಗಿವೆ.