Sunday, July 27, 2025

ಸತ್ಯ | ನ್ಯಾಯ |ಧರ್ಮ

ಪ್ರಕರಣದ ಸಂಪೂರ್ಣ ರೂವಾರಿಯೇ ಪವಿತ್ರಾ ಗೌಡ: ರಿಮ್ಯಾಂಡ್ ಕಾಪಿಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನವಾಗಿರುವ ಪವಿತ್ರಾಗೌಡ ಕುರಿತು ಮತ್ತೊಂದು ಸ್ಪೋಟಕ ಮಾಹಿತಿ ಹೊರಬಿದ್ದಿದೆ. ಪ್ರಕರಣದಲ್ಲಿ A1 ಆರೋಪಿಯಾಗಿರುವ ಪವಿತ್ರಾ ಗೌಡ ಇಡೀ ಪ್ರಕರಣದ ರೂವಾರಿ, ಆತನ ಕೊಲೆಗೆ ಸಂಚು ರೂಪಿಸಿದ್ದೇ ಆಕೆ ಎಂಬ ಮಾಹಿತಿ ಹೊರಬಿದ್ದಿದೆ.

ನಟ ದರ್ಶನ್ ಹಾಗೂ ಇತರೆ ಆರೋಪಿಗಳಿಗೆ ಸ್ವತಃ ತಾನೇ ಪ್ರಚೋದನೆ ನೀಡಿ ಕೊಲೆ ಮಾಡಿಸಿರುವುದು ಎಂದು ಪವಿತ್ರಾಗೌಡ ಸದ್ಯದ ತನಿಖೆಯಲ್ಲಿ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳಾದ ದರ್ಶನ್ ಮತ್ತು ಪವಿತ್ರಾಗೌಡ ಪೊಲೀಸರಿಗೆ ಸಲ್ಲಿಸಿರುವ ರಿಮ್ಯಾಂಡ್‌ ಕಾಪಿಯಲ್ಲೂ ಕೂಡ ಇದನ್ನು ಒಪ್ಪಿಕೊಂಡಿರುವ ಮಹತ್ವದ ದಾಖಲೆ ಹೊರಬಿದ್ದಿದೆ.

ಅಷ್ಟೇ ಅಲ್ಲದೇ ಆರೋಪಿಯೊಬ್ಬನ ಮೊಬೈಲ್‌ನಲ್ಲಿ ಮಹತ್ವದ ಪುರಾವೆ ಪತ್ತೆಯಾಗಿದ್ದು, ‘ಕೊಲೆ ಪ್ರಕರಣದ ಆರೋಪಿಯೊಬ್ಬನ ಮೊಬೈಲ್‌ನಲ್ಲಿ ಮಹತ್ವದ ಪುರಾವೆ ಇದೆ. ಅದನ್ನು ಆರೋಪಿಗೆ ಕಳುಹಿಸಿದವರು ಯಾರು ಎಂಬ ಬಗ್ಗೆ ಮಾಹಿತಿ ತಿಳಿಯಲು ತನಿಖೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.

ಎ1 ಆರೋಪಿಯೇ ಕೃತ್ಯಕ್ಕೆ ಪ್ರಮುಖ ಕಾರಣ ಕರ್ತೆಯಾಗಿದ್ದು ಈಕೆಯು ಪ್ರಚೋದನೆ ನೀಡಿ ಇತರೆ ಆರೋಪಿಗಳೊಂದಿಗೆ ಸೇರಿ ಕೊಲೆಗೆ ಒಳಸಂಚು ರೂಪಿಸಿರುವುದು ಮತ್ತು ಕೃತ್ಯದಲ್ಲಿ ಭಾಗಿಯಾಗಿರುವುದು ತನಿಖೆಯಲ್ಲಿ ದೃಢಪಟ್ಟಿರುತ್ತದೆ.

ಎ2 ಆರೋಪಿಯು ತನ್ನ ಹಣ ಹಾಗೂ ಇತರೆ ಆರೋಪಿಗಳನ್ನು ಒಳಗೊಂಡ ತನ್ನ ಅಭಿಮಾನಿ ಬಳಗವನ್ನು ಬಳಸಿಕೊಂಡು ಕೃತ್ಯದಲ್ಲಿ ಭಾಗಿಯಾಗಿ ಹಾಗೂ ಭಾಗಿಯಾಗಿಸಿ ಕಾನೂನನ್ನು ದುರುಪಯೊಗ ಪಡಿಸಿಕೊಂಡಿರುವುದು ಸಾಕ್ಷ್ಯಾಧಾರಗಳಿಂದ ಕಂಡು ಬಂದಿರುತ್ತದೆ ಎಂದು ರಿಮ್ಯಾಂಡ್‌ ಕಾಪಿಯಲ್ಲಿ ಮಾಹಿತಿ ಬಹಿರಂಗವಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page