Thursday, March 27, 2025

ಸತ್ಯ | ನ್ಯಾಯ |ಧರ್ಮ

ಪಕ್ಷದಿಂದ 6 ವರ್ಷ ಉಚ್ಚಾಟನೆ: ಪುರಂದರ ದಾಸರ ಸ್ಮರಿಸಿದ ಯತ್ನಾಳ್‌

ಬೆಂಗಳೂರು: ಬಿಜೆಪಿ ಪಕ್ಷದ ನಾಯಕರ ಬಗ್ಗೆ ಸಾರ್ವಜನಿಕವಾಗಿ ಮನಸೋಇಚ್ಛೆ ಆಕ್ರೋಶ ಹೊರಹಾಕುತ್ತಿದ್ದ ಕಾರಣ, ಪಕ್ಷದ ಕೇಂದ್ರ ಶಿಸ್ತು ಸಮಿತಿ, ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರನ್ನ 6 ವರ್ಷಗಳಕಾಲ ಪಕ್ಷದಿಂದ ಉಚ್ಚಾಟನೆ ಮಾಡಿರುವ ಹಿನ್ನಲೆಯಲ್ಲಿ, ಯತ್ನಾಳ್‌ ಅವರು ಪುರಂದರ ದಾಸರ ಸ್ಮರಿಸುವ ಮೂಲಕ ಬೇಸರ ಹೊರಹಾಕಿದ್ದಾರೆ.

ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಪುತ್ರ ಹಾಗೂ ಭಾರತೀಯ ಜನತಾ ಪಾರ್ಟಿಯ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರರವರ ವಿರುದ್ದ ಪದೇ-ಪದೇ ಸಾರ್ವಜನಿಕವಾಗಿ ಮನಸೋಇಚ್ಛೆ ಆಕ್ರೋಶ ಹೊರಹಾಕುತ್ತಿದ್ದ ಕಾರಣ, ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ವಿರುದ್ದ ಕ್ರಮ ಕೈಗೊಂಡಿರುವ ಪಕ್ಷದ ಕೇಂದ್ರ ಶಿಸ್ತು ಸಮಿತಿ, ಯತ್ನಾಳ್‌ ಅವರನ್ನ 6 ವರ್ಷಗಳಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ.

ಈ ಹಿನ್ನಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರು, ವಂಶಪಾರಂಪರ್ಯ ರಾಜಕೀಯ, ಭ್ರಷ್ಟಾಚಾರ, ಪಕ್ಷದೊಳಗಿನ ಸುಧಾರಣೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ, ಏಕವ್ಯಕ್ತಿ ದಬ್ಬಾಳಿಕೆಯನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು ನನ್ನನ್ನು 6 ವರ್ಷಗಳ ಕಾಲ ಪಕ್ಷದಿಂದ ಹೊರಹಾಕಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

‘ಕಳ್ಳರನ್ನು ಕಳ್ಳರು ಎಂದು ಕರೆದಿದ್ದಕ್ಕಾಗಿ ಪಕ್ಷ ನನಗೆ ಈ ಬಹುಮಾನ ನೀಡಿದೆʼ ಎಂದು ಯತ್ನಾಳ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕೆಲವು ಸ್ಥಾಪಿತ ಹಿತಾಸಕ್ತಿಗಳು ತಮ್ಮ ಕಾರ್ಯಸೂಚಿಯನ್ನು ಯಶಸ್ವಿಯಾಗಿ ಮುಂದುವರಿಸುವಲ್ಲಿ ತಮ್ಮ ಪಾತ್ರವನ್ನು ವಹಿಸಿವೆ. ಆದರೆ, ನನ್ನನ್ನು ಅಮಾನತುಗೊಳಿಸುವ ನಿರ್ಧಾರವು ಭ್ರಷ್ಟಾಚಾರ, ಕುಟುಂಬ ರಾಜಕೀಯ, ಉತ್ತರ ಕರ್ನಾಟಕದ ಅಭಿವೃದ್ಧಿ ಮತ್ತು ಹಿಂದುತ್ವದ ವಿರುದ್ಧದ ನನ್ನ ಹೋರಾಟವನ್ನು ತಡೆಯುವುದಿಲ್ಲ. ನಾನು ನನ್ನ ಜನರಿಗೆ ಅದೇ ಹುರುಪು ಮತ್ತು ದೃಢತೆಯಿಂದ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.

ಮುಂದುವರೆದು ಅವರು, ಎಲ್ಲಾ ಕಾರ್ಯಕರ್ತರಿಗೆ, ಹಿತೈಷಿಗಳಿಗೆ, ಸ್ನೇಹಿತರಿಗೆ, ಪರಿಚಯಸ್ಥರಿಗೆ, ಸ್ವಾಮೀಜಿಗಳಿಗೆ, ಮಾಧ್ಯಮಗಳಿಗೆ, ಬೆಂಬಲದ ಆಧಾರಸ್ತಂಭವಾಗಿರುವ ನನ್ನ ಕುಟುಂಬಕ್ಕೆ ಮತ್ತು ದೇವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಈ ವೇಳೆ ಅವರು, ಸತ್ಯವಂತರಿಗಿದು ಕಾಲವಲ್ಲ ದುಷ್ಟಜನರಿಗೆ ಸುಭಿಕ್ಷಕಾಲ, ಉಪಕಾರ ಮಾಡಿದರೆ ಅಪಕರಿಸುವ ಕಾಲ,ಸಕಲವು ತಿಳಿದವಗೆ ದುರ್ಭಿಕ್ಷ ಕಾಲ. ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ,ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ,ಸತ್ಯವಂತರಿಗಿದು ಕಾಲವಲ್ಲ ಎಂಬ ಸಾಲುಗಳನ್ನ ಬರೆದುಕೊಳ್ಳುವ ಮೂಲಕ, ಪುರಂದರ ದಾಸರನ್ನು ಸ್ಮರಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page