Home ಅಪರಾಧ ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ CID ಗೆ ಹಸ್ತಾಂತರ

ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ CID ಗೆ ಹಸ್ತಾಂತರ

0

ಮಾಜಿ ಸಚಿವ ಎಚ್‌ಡಿ ರೇವಣ್ಣ ಹಿರಿಯ ಪುತ್ರ ಸೂರಜ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ CID ಗೆ ಹಸ್ತಾಂತರಿಸಿ ಆದೇಶ ಹೊರಡಿಸಿದೆ.

ರಾಜ್ಯ ಪೊಲೀಸ್ ಮಹಾನಿರ್ದೆಶಕರ ಕಚೇರಿಯಿಂದ ಹೊರಡಿಸಲಾದ ಆದೇಶದಲ್ಲಿ, ಕಾನೂನು ಸುವ್ಯವಸ್ಥೆ ಎಡಿಜಿಪಿ ಆರ್ ಹಿತೇಂದ್ರ ಅವರು, ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಕ್ರೈಮ್ ನಂಬರ್ 92/2024 ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದ್ದು, ಈ ಕೂಡಲೇ ಮುಂದಿನ ತನಿಖೆಗಾಗಿ ಖುದ್ದು ಸಿಐಡಿ ಕಚೇರಿಗೆ ತೆರಳಿ ಕೇಸ್ ಫೈಲ್ ಅನ್ನು ಸಿಐಡಿಗೆ ಹ್ಯಾಂಡ್ ಓವರ್ ಮಾಡುವಂತೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಆದೇಶ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಪಿ ಸೂರಜ್ ರೇವಣ್ಣ ಸಮೇತ ಹೊಳೆನರಸೀಪುರ ಪೊಲೀಸರು ಮಧ್ಯಾಹ್ನ ಬೆಂಗಳೂರಿಗೆ ತೆರಳಲಿದ್ದು, ಈವರೆಗೆ ಸಿಕ್ಕ ಸಾಕ್ಷ್ಯಾಧಾರ, ಪ್ರತಿದೂರು ಹಾಗೂ ಕಲೆ ಹಾಕಿರುವ ಎಲ್ಲಾ ದಾಖಲೆಗಳನ್ನು CID ಕಡೆಗೆ ಹಸ್ತಾಂತರಿಸಲು ಸಿದ್ಧತೆ ನಡೆಸಿದ್ದಾರೆ.

ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಹಿರಿಯ ಪುತ್ರ ಆಗಿರುವ ಎಂಎಲ್ ಸಿ ಸೂರಜ್ ರೇವಣ್ಣ ಈ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿಗಳು, ಮೊಬೈಲ್ ಕಾಲ್ ಸೇರಿದಂತೆ ಇನ್ನಿತರೆ ದಾಖಲೆಗಳ ಸಹಿತ ಜೆಡಿಎಸ್ ಕಾರ್ಯಕರ್ತನಾಗಿರುವ ಸಂತ್ರಸ್ತನ ವಿರುದ್ಧ ದೂರು ನೀಡಲು ಬಂದಾಗ ಪೊಲೀಸ್ ಠಾಣೆಯಲ್ಲೇ ಬಂಧನ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಮಧ್ಯೆ MLC ಸೂರಜ್‌ ರೇವಣ್ಣನ ವಿರುದ್ದ ದೂರು ನೀಡಿದ್ದ ಸಂತ್ರಸ್ತ ಯುವಕನನ್ನ ವೈದ್ಯಕೀಯ ಪರೀಕ್ಷೆಗಾಗಿ ಬೆಂಗಳೂರಿಗೆ ಸ್ಥಳಾಂತರ ಮಾಡಲಾಗಿದೆ. ಸಂತ್ರಸ್ತನನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಗೆ ಒಳಪಡಿಸಲಾಗಿದೆ. ಸಧ್ಯ ಸಿಕ್ಕ ಸಾಕ್ಷ್ಯ ಹಾಗೂ ಇನ್ನಿತರೆ ದಾಖಲೆಗಳನ್ನು ಇಂದು CID ಗೆ ಹಸ್ತಾಂತರ ಮಾಡಲಾಗುತ್ತದೆ.

You cannot copy content of this page

Exit mobile version