Tuesday, September 2, 2025

ಸತ್ಯ | ನ್ಯಾಯ |ಧರ್ಮ

ಧರ್ಮಸ್ಥಳ ಪ್ರಕರಣ: ಸದ್ದಿಲ್ಲದೆ ಎಂಟ್ರಿ ಕೊಟ್ಟ ‘ಇಡಿ’.. ‘ಒಡನಾಡಿ’ ಮತ್ತು ‘ಸಂವಾದ’ ಸಂಸ್ಥೆಗಳ ಬ್ಯಾಂಕ್ ಖಾತೆ ಮೇಲೆ ಕಣ್ಣು

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಿ ಮೂಲಗಳಿಂದ ಹಣಕಾಸು ವ್ಯವಹಾರ ನಡೆದಿದೆರುವ ಆರೋಪ ಕೇಳಿ ಬಂದಿದೆ. ಸೋಮವಾರವಷ್ಟೇ ರಾಜ್ಯ ಬಿಜೆಪಿ ನಾಯಕರು ಧರ್ಮಸ್ಥಳ ಸರಣಿ ಸಾವುಗಳ ಪ್ರಕರಣ ಮತ್ತು ಸೌಜನ್ಯ ಪ್ರಕರಣದಲ್ಲಿ ಹೋರಾಟ ಮಾಡಿಕೊಂಡು ಬಂದಿರುವವರ ವಿರುದ್ಧ ವಿದೇಶಿ ಮೂಲಗಳಿಂದ ಹಣ ಹರಿದು ಬಂದಿರುವ ‘ಷಡ್ಯಂತ್ರ’ದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಸದ್ದಿಲ್ಲದೆ ಜಾರಿ ನಿರ್ದೇಶನಾಲಯ ಧರ್ಮಸ್ಥಳ ಪ್ರಕರಣದಲ್ಲಿ ತನಿಖೆಗೆ ಮುಂದಾಗಿದೆ.

ವಿದೇಶಿ NGO ಗಳಿಂದ ಹಣ ಫಂಡಿಂಗ್ ಆಗಿದೆಯಾ ಎಂಬ ಅನುಮಾನ ಹಿನ್ನೆಲೆಯಲ್ಲಿ ಒಡನಾಡಿ ಹಾಗೂ ಸಂವಾದ ಸಂಸ್ಥೆಗಳ ಅಕೌಂಟ್​ ಗಳ ಬಗ್ಗೆ ಇಡಿ ಮಾಹಿತಿ ಸಂಗ್ರಹ ಮಾಡುವ ಕೆಲಸ ಆರಂಭಿಸಿದೆ. ಹೀಗಾಗಿ ಕೆಲ ಅಕೌಂಟ್ ಗಳ ಮಾಹಿತಿ ನೀಡುವಂತೆ ಬ್ಯಾಂಕ್​​ಗೆ ಇಡಿ  ಪತ್ರದ ಮೂಲಕ ಮನವಿ ಮಾಡಿದೆ.

ಕಾನೂನು ಬಾಹಿರವಾಗಿ ಹಣ ಬಂದಿರುವ ಆರೋಪ ಬಂದಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು, ಕಳೆದ 5 ವರ್ಷಗಳ ಟ್ರಾನ್ಸ್​ಕ್ಷನ್ ನೀಡುವಂತೆ ಕೆಲ ಬ್ಯಾಂಕ್‌ಗಳಿಗೆ ಪತ್ರ ಬರೆದಿದೆ. ವಿದೇಶದಿಂದ ಹಣ ಬಂದಿರುವ ಕುರಿತು ಮಾಹಿತಿ ಹಾಗೂ ಅದಕ್ಕೆ ಸಂಬಂಧಿಸಿದ ಪ್ರತಿಗಳು, ವಿದೇಶದಿಂದ ಹಣ ಬಂದರೆ ಅದಕ್ಕೆ ಕಾರಣವೇನು ಎಂಬುದನ್ನು ತಿಳಿಸುವಂತೆ ಬ್ಯಾಂಕ್​ ಗಳಿಗೆ ಇಡಿ ಅಧಿಕಾರಿಗಳು ಪತ್ರದ ಮೂಲಕ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ ವಿಶೇಷ ಕೇಳಿ ಬಂದ ಹೆಸರುಗಳಲ್ಲಿ ಒಡನಾಡಿ ಸಂಸ್ಥೆ ಮತ್ತು ಸಂವಾದ ಸಂಸ್ಥೆಗಳಿಗೆ ವಿದೇಶಗಳಿಂದ ಫಂಡಿಂಗ್ ಆಗಿರುವ ಆರೋಪಗಳು ಕೇಳಿ ಬಂದಿದ್ದವು. ಈ ದೂರು ಆಧರಿಸಿ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ.

ಅಷ್ಟೇ ಅಲ್ಲದೆ ಪ್ರಮುಖ ಹೆಸರುಗಳಾದ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್ ಸೇರಿದಂತೆ ಪ್ರಮುಖ ಹೋರಾಟಗಾರದ ಬ್ಯಾಂಕ್ ಖಾತೆಗಳನ್ನೂ ಇಡಿ ಜಾಲಾಡುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಕಾರಣಕ್ಕೆ ಇಡಿ ಬ್ಯಾಂಕ್ ಗಳಿಗೆ ಪತ್ರ ಬರೆದಿದ್ದು ಕಳೆದ 5 ವರ್ಷಗಳಿಂದ ವಿದೇಶಿ ಮೂಲಗಳಿಂದ ಹರಿದು ಬಂದ ಹಣದ ಮೂಲದ ಬಗ್ಗೆ ಮಾಹಿತಿ ಸಂಗ್ರಹಿಸಲು ಮುಂದಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page