ಖ್ಯಾತ ವಕೀಲ ಫಾಲಿ ಎಸ್ ನಾರಿಮನ್ ನಿಧನ ವಯೋಸಹಜ ಅನಾರೋಗ್ಯದಿಂದ ಇಂದು (ಬುಧವಾರ) ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.
ಫಾಲಿ ನಾರಿಮನ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಹಿರಿಯ ವಕೀಲರು. ಅವರು 1991ರಿಂದ 2010ರವರೆಗೆ ಭಾರತೀಯ ವಕೀಲರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.
ವಕೀಲಿ ವೃತ್ತಿಯಲ್ಲಿ ಅವರ ಸೇವೆಯನ್ನು ಗುರುತಿಸಿ ಭಾರತ ಸರ್ಕಾರವು 1991ರಲ್ಲಿ ಪದ್ಮಭೂಷಣ ಮತ್ತು 2007ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಿತು. ಅದೇ ರೀತಿ ನಾರಿಮನ್ ಕೂಡ 1999ರಿಂದ 2005ರವರೆಗೆ ರಾಜ್ಯಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.