ನವದೆಹಲಿ: ದೇಶದಲ್ಲಿ ಕೋವಿಡ್ ದೃಢ ಪಡುತ್ತಿರುವವರ ಸಂಖ್ಯೆ ಹಚ್ಚಾಗುತ್ತಿರುವ ಹಿನ್ನಲೆಯಲ್ಲಿ, ದೆಹಲಿ ಸರ್ಕಾರವು ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಫೇಸ್ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ, ಹಾಗೂ ನಿಯಮ ಉಲ್ಲಂಘಿಸುವವರಿಗೆ 500 ರೂಪಾಯಿ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.
ಈ ಅಧಿಸೂಚನೆಯ ನಿಬಂಧನೆಯ ಅಡಿಯಲ್ಲಿ ದಂಡವು ಖಾಸಗಿ ನಾಲ್ಕು ಚಕ್ರದ ವಾಹನಗಳಲ್ಲಿ ಒಟ್ಟಿಗೆ ಪ್ರಯಾಣಿಸುವ ವ್ಯಕ್ತಿಗಳಿಗೆ ಅನ್ವಯಿಸುವುದಿಲ್ಲ ಎಂದು ಮಾಹಿತಿ ನೀಡಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.