Monday, June 17, 2024

ಸತ್ಯ | ನ್ಯಾಯ |ಧರ್ಮ

ಬ್ರೇಕಿಂಗ್ ಸುದ್ದಿ: ಸು‍ಳ್ಳು ಸುದ್ದಿ ಪ್ರಕರಣ – ಹಲವು ಬಲಪಂಥೀಯ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲು

ವಾರ್ತಾಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.

ಈ ಕುರಿತು ಮುಖ್ಯಮಂತ್ರಿಗಳ ಟ್ವಿಟರ್‌ ಅಕೌಂಟಿನಿಂದ ಮಾಡಲಾಗಿರುವ ಟ್ವೀಟಿನಲ್ಲಿ “ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು.
ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ” ಎಂದು ಹೇಳಲಾಗಿದೆ.

ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ ಎಂದೂ ಮುಖ್ಯಮಂತ್ರಿಗಳು ಹೇಳಿದ್ದಾರೆ

Related Articles

ಇತ್ತೀಚಿನ ಸುದ್ದಿಗಳು