Home ರಾಜ್ಯ ಉತ್ತರ ಕನ್ನಡ ಸುಳ್ಳು ಜಾತಿ ಪ್ರಮಾಣ ಪತ್ರ: ಸಚಿವ ಮಂಕಾಳ ವೈದ್ಯ ವಿರುದ್ಧ ರಾಜ್ಯಪಾಲರಿಗೆ ದೂರು

ಸುಳ್ಳು ಜಾತಿ ಪ್ರಮಾಣ ಪತ್ರ: ಸಚಿವ ಮಂಕಾಳ ವೈದ್ಯ ವಿರುದ್ಧ ರಾಜ್ಯಪಾಲರಿಗೆ ದೂರು

0

ಒಳನಾಡು ಮತ್ತು ಜಲಸಾರಿಗೆ ಸಚಿವ ಮಂಕಾಳ ವೈದ್ಯರ ವಿರುದ್ಧ ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿದ ಆರೋಪದಡಿ ಮೀನುಗಾರಿಕೆ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದ್ದು, ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸರಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡುವಂತೆ ಮನವಿ ಮಾಡಲಾಗಿದೆ.

ಭಟ್ಕಳದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣ ವೇದಿಕೆ ಗುರುವಾರ ಸಚಿವ ಮಂಕಾಳ ವೈದ್ಯ ಅವರ ವಿರುದ್ಧ ಸುಳ್ಳು ಜಾತಿ ಪ್ರಮಾಣಪತ್ರ ಪಡೆದಿರುವ ಬಗ್ಗೆ ದೂರು ಸಲ್ಲಿಸಿದೆ.

2007-2009ರ ಅವಧಿಯಲ್ಲಿ ಮಂಕಾಳ ವೈದ್ಯ, ತಾವು ಮೊಗೇರ ಎಂಬ ಪರಿಶಿಷ್ಟ ಜಾತಿಗೆ ಸೇರಿದವರು ಎಂದು ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಸಿ, ಉತ್ತರ ಕನ್ನಡ ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷ ಸ್ಥಾನ ಗಿಟ್ಟಿಸಿಕೊಂಡಿದ್ದರು.

ಆದರೆ ಅವರು ಅದೇ ಹೆಸರಿನ ಹಿಂದುಳಿದ ಜಾತಿ ಪ್ರವರ್ಗ-1ಕ್ಕೆ ಸೇರಿದ ಮೊಗೇರ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ರಾಜ್ಯಪಾಲರಿಗೆ ಭಟ್ಕಳದ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ರಕ್ಷಣ ವೇದಿಕೆ ಸಲ್ಲಿಸಿದ ದೂರಿನಲ್ಲಿ ಹೇಳಿದೆ.

You cannot copy content of this page

Exit mobile version