Thursday, February 5, 2026

ಸತ್ಯ | ನ್ಯಾಯ |ಧರ್ಮ

ಖಾಸಗಿ ಫೈನಾನ್ಸ್ ಸಿಬ್ಬಂದಿ ಕಿರುಕುಳ ರೈತ ಆತ್ಮಹ*ತ್ಯೆ

ಹಾಸನ : ಜಿಲ್ಲೆಯ, ಚನ್ನರಾಯಪಟ್ಟಣ ತಾಲೂಕಿನ, ಶ್ರವಣಬೆಳಗೊಳ ಹೋಬಳಿ ಕೊತ್ತನಘಟ್ಟ ಗ್ರಾಮದಲ್ಲಿ ಫೈನಾನ್ಸ್ ಸಿಬ್ಬಂದಿ ಕಿರುಕುಳದಿಂದ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯೋಗೇಶ್ (50) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ರೈತ. ಚನ್ನರಾಯಪಟ್ಟಣದ ಶ್ರೀರಾಮ ಫೈನಾನ್ಸ್‌ನಲ್ಲಿ ಏಳು ಲಕ್ಷ ಸಾಲ ಪಡೆದಿದ್ದ ಯೋಗೇಶ್ ಅವರು ಪ್ರತಿ ತಿಂಗಳು ಸರಿಯಾಗಿ ಕಂತು ಕಟ್ಟುತ್ತಿದ್ದರು. ಆದರೆ ಕಳೆದ ಎರಡು ತಿಂಗಳಿನಿಂದ ಕಂತು ಕಟ್ಟದೆ ಬಾಕಿ ಉಳಿಸಿಕೊಂಡಿದ್ದರು. ಹೀಗಾಗಿ ಶ್ರೀರಾಮ ಫೈನಾನ್ಸ್‌ನ ಇಬ್ಬರು ಸಿಬ್ಬಂದಿಗಳು ನಿನ್ನೆ ರಾತ್ರಿ ಮನೆಗೆ ಬಂದು ಗಲಾಟೆ ಮಾಡಿ, ಮನೆ ಸೀಜ಼್ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಇದರಿಂದ ಮಾನಕ್ಕೆ ಅಂಜಿ ರಾತ್ರಿ ಎರಡು ಗಂಟೆ ಸಮಯದಲ್ಲಿ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೂ ಫೈನಾನ್ಸ್ ವಿರುದ್ಧ ಕುಟುಂಬಸ್ಥರು ಹಾಗೂ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. . ಈ ಘಟನೆ ಶ್ರವಣಬೆಳಗೊಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ  ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page