ಬೆಂಗಳೂರು: ಪಂಜಾಬ್‌ನಲ್ಲಿ ಅಪಘಾತಕ್ಕೆ ತುತ್ತಾದ ರೈತಪರ ಹೋರಾಟಗಾರ ಕುರುಬೂರು ಶಾಂತಕುಮಾರ್‌ರನ್ನು ಹೆಚ್ಚಿನ ಚಿಕಿತ್ಸೆಗಾಗಿ ಏರ್‌ಲಿಫ್ಟ್ ಮಾಡಲಾಗುತ್ತಿದ್ದು, ಇಂದು (ಫೆ.16) ಬೆಂಗಳೂರಿಗೆ ಕರೆತರಲಾಗುತ್ತಿದೆಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಶಾಂತಕುಮಾರ್‌ರವರನ್ನು ಕರೆತರಲಾಗುತ್ತಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯುವ ಸಾಧ್ಯತೆ ಇದೆ
ದೆಹಲಿ-ಕನೋಲಿ ಗಡಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವು ತಿಂಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆ ಸಂಬಂಧ ದೆಹಲಿಯಲ್ಲಿ ಕರೆಯಲಾಗಿದ್ದ ಸಭೆಗೆ ತೆರಳುತ್ತಿದ್ದಾಗ ಕುರುಬೂರ್ ಶಾಂತಕುಮಾರ್ ಅವರ ಕಾರು ಭೀಕರ ಅಪಘಾತಕ್ಕೆ ತುತ್ತಾಗಿತ್ತು. ಇದೀಗ ಪಂಜಾಬ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕುರುಬೂರ್ ಶಾಂತಕುಮಾರ್ ಅವರನ್ನು ಏರ್‌ಲಿಫ್ಟ್ ಮಾಡಲು ಸಿದ್ಧತೆ ನಡೆದಿದೆ.
ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಹಿನ್ನೆಲೆಯಲ್ಲಿ ಇದೀಗ ಅಧಿಕಾರಿಗಳು ಏರ್ ಆಂಬುಲೆನ್ಸ್ ಸಿದ್ಧಪಡಿಸಿದ್ದು, ರೈತ ಮುಖಂಡ ಶಾಂತಕುಮಾರ್ ಅವರನ್ನು ಇಂದು ಚಂಡೀಗಡದಿಂದ ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಾರು ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು, ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವ ಹಿನ್ನೆಲೆ ಬೆಂಗಳೂರಿಗೆ ಕರೆದುಕೊಂಡು ಬರಲು ನಿರ್ಧರಿಸಲಾಗಿದೆ.