Home ಅಪಘಾತ ಜಾರ್ಖಂಡ್‌ನಲ್ಲಿ ಭೀಕರ ಅಪಘಾತ: ಟ್ರಕ್‌ಗೆ ಬಸ್ ಡಿಕ್ಕಿ, 18 ಕಾಂವಡ್ ಯಾತ್ರಾರ್ಥಿಗಳ ದುರ್ಮರಣ

ಜಾರ್ಖಂಡ್‌ನಲ್ಲಿ ಭೀಕರ ಅಪಘಾತ: ಟ್ರಕ್‌ಗೆ ಬಸ್ ಡಿಕ್ಕಿ, 18 ಕಾಂವಡ್ ಯಾತ್ರಾರ್ಥಿಗಳ ದುರ್ಮರಣ

0

ದಿಯೋಘರ್, ಜಾರ್ಖಂಡ್: ಜಾರ್ಖಂಡ್‌ನ ದಿಯೋಘರ್‌ ಬಳಿ ಮಂಗಳವಾರ (ಜುಲೈ 29, 2025) ಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾಂವಡ್ ಯಾತ್ರೆಯ ಸಂದರ್ಭದಲ್ಲಿ ಇಂದು ಮುಂಜಾನೆ 4:30ಕ್ಕೆ ಮೋಹನ್‌ಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಜಮುನಿಯಾ ಅರಣ್ಯದ ಸಮೀಪದಲ್ಲಿ, ಯಾತ್ರಾರ್ಥಿಗಳನ್ನು ಹೊತ್ತ ಬಸ್ಸೊಂದು ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಪೊಲೀಸರ ಮಾಹಿತಿ ಪ್ರಕಾರ, ಈ ಅಪಘಾತದಲ್ಲಿ 18 ಯಾತ್ರಾರ್ಥಿಗಳು ದುರ್ಮರಣಕ್ಕೀಡಾಗಿದ್ದಾರೆ ಮತ್ತು 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ಕೂಡಲೇ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿ, ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿವೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳೀಯರು ಈ ಘಟನೆಯ ಬಗ್ಗೆ ಮೋಹನ್‌ಪುರ್ ಪೊಲೀಸ್ ಠಾಣೆಯ ಇನ್‌ಚಾರ್ಜ್ ಪ್ರಿಯರಂಜನ್ ಕುಮಾರ್‌ಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಪ್ರಿಯರಂಜನ್ ಕುಮಾರ್ ತಮ್ಮ ತಂಡದೊಂದಿಗೆ ಘಟನಾ ಸ್ಥಳಕ್ಕೆ ಧಾವಿಸಿ, ಮೋಹನ್‌ಪುರ್ ಬ್ಲಾಕ್ ಅಭಿವೃದ್ಧಿ ಅಧಿಕಾರಿಗೆ ಮಾಹಿತಿ ನೀಡಿದರು. ನಂತರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿ, ಗಾಯಗೊಂಡವರನ್ನು ಆಂಬ್ಯುಲೆನ್ಸ್ ಮೂಲಕ ಮೋಹನ್‌ಪುರ್ ಸಿಎಚ್‌ಸಿಗೆ ಕಳುಹಿಸಲಾಯಿತು.

ಈ ದುರ್ಘಟನೆಗೆ ಸಂಸದ ನಿಶಿಕಾಂತ್ ದುಬೆ ಸಂತಾಪ ವ್ಯಕ್ತಪಡಿಸಿದ್ದಾರೆ. “ನನ್ನ ಲೋಕಸಭಾ ಕ್ಷೇತ್ರದ ದೇವಘರ್‌ನಲ್ಲಿ ಶ್ರಾವಣ ಮಾಸದಲ್ಲಿ ಕನ್ವರ್ ಯಾತ್ರೆಯ ಸಂದರ್ಭದಲ್ಲಿ ಸಂಭವಿಸಿದ ಬಸ್ ಮತ್ತು ಟ್ರಕ್ ಅಪಘಾತದಲ್ಲಿ 18 ಭಕ್ತರು ಮೃತಪಟ್ಟಿದ್ದಾರೆ. ಬಾಬಾ ಬೈದ್ಯನಾಥರು ಅವರ ಕುಟುಂಬಗಳಿಗೆ ಈ ನಷ್ಟವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಅವರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.


You cannot copy content of this page

Exit mobile version