Home ರಾಜಕೀಯ ಕೇಂದ್ರದಿಂದ ಅಗತ್ಯಕ್ಕಿಂತ 70% ಕಡಿಮೆ ರಸಗೊಬ್ಬರ ಪೂರೈಕೆ: ಕೇಂದ್ರದ ವಿರುದ್ಧ ಈಶ್ವರ್ ಖಂಡ್ರೆ ಆಕ್ರೋಶ

ಕೇಂದ್ರದಿಂದ ಅಗತ್ಯಕ್ಕಿಂತ 70% ಕಡಿಮೆ ರಸಗೊಬ್ಬರ ಪೂರೈಕೆ: ಕೇಂದ್ರದ ವಿರುದ್ಧ ಈಶ್ವರ್ ಖಂಡ್ರೆ ಆಕ್ರೋಶ

0

ಬೆಂಗಳೂರು: ರೈತರ ಅವಶ್ಯಕತೆಗೆ ಅನುಗುಣವಾಗಿ ರಾಜ್ಯಗಳಿಗೆ ರಸಗೊಬ್ಬರ ಪೂರೈಸುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿದ್ದು, ಕರ್ನಾಟಕಕ್ಕೆ ಅಗತ್ಯ ಪ್ರಮಾಣದ ರಸಗೊಬ್ಬರ ಒದಗಿಸದ ಪರಿಣಾಮ ರಾಜ್ಯದಲ್ಲಿ ಕೊರತೆ ಉಂಟಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಆರೋಪಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಲ್ಲಿಸಿದ್ದ ಬೇಡಿಕೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಕೇವಲ ಶೇ.30ರಷ್ಟು ರಸಗೊಬ್ಬರವನ್ನು ಮಾತ್ರ ಪೂರೈಸಿದೆ ಎಂದು ಹೇಳಿದರು. ಇದರಿಂದ ಹಲವು ಜಿಲ್ಲೆಗಳಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಕೃಷಿ ಚಟುವಟಿಕೆಗಳ ಮೇಲೂ ಪರಿಣಾಮ ಬೀರುವ ಆತಂಕ ಎದುರಾಗಿದೆ ಎಂದು ತಿಳಿಸಿದರು.

ರಾಜ್ಯದ ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಯಾವುದೇ ತಾರತಮ್ಯ ಮಾಡದೆ ಪೂರ್ಣ ಪ್ರಮಾಣದಲ್ಲಿ ರಸಗೊಬ್ಬರ ಪೂರೈಕೆ ಮಾಡಬೇಕು ಎಂದು ಅವರು ಒತ್ತಾಯಿಸಿದರು.

ಇದೇ ವೇಳೆ, ಬೀದರ್ ಜಿಲ್ಲೆಯಲ್ಲಿ ರಸಗೊಬ್ಬರವನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಹಾಗೂ ಕಾಳಸಂತೆ ವ್ಯವಹಾರ ನಡೆಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ಖಂಡ್ರೆ ಹೇಳಿದರು. ಅಕ್ರಮ ಮಾರಾಟದಲ್ಲಿ ತೊಡಗಿರುವ ಅಂಗಡಿಗಳ ಮೇಲೆ ದಾಳಿ ನಡೆಸಿ, ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ಅವರು ತಿಳಿಸಿದರು.

You cannot copy content of this page

Exit mobile version