Monday, July 8, 2024

ಸತ್ಯ | ನ್ಯಾಯ |ಧರ್ಮ

ಫೇಕ್ ನ್ಯೂಸ್ ಹರಡುವವರ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಿ : ಪೊಲೀಸರಿಗೆ ಸಿದ್ದರಾಮಯ್ಯ ಸೂಚನೆ

ಸುಳ್ಳು ಸುದ್ದಿ ಪ್ರಸಾರ ಮಡುವ ಮತ್ತು ಸಾಮಾಜಿಕ ಜಾಲತಾಣದಲ್ಲಿ ಫೇಕ್ ನ್ಯೂಸ್ ಹರಡುವವರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮತ್ತೊಮ್ಮೆ ಸೂಚನೆ ನೀಡಿದ್ದಾರೆ.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ 2024ರ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶ ಉದ್ಘಾಟಿಸಿ, ನೂತನ ತಂತ್ರಾಂಶಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಾಂತ್ರಿಕವಾಗಿ ಎಷ್ಟೇ ಅವಕಾಶಗಳಿದ್ದರೂ ಫೇಕ್ ನ್ಯೂಸ್ ಹರಡುವವರು ಇನ್ನೂ ಹರಡುತ್ತಲೇ ಇದ್ದಾರೆ ಎಂದು ಹೇಳಿದ್ದಾರೆ.

ಫೇಕ್ ನ್ಯೂಸ್ ಗಳು ಸಮಾಜದ ನೆಮ್ಮದಿಗೆ ಕಂಟಕವಾಗಿವೆ. ಇವುಗಳ ತಡೆಗೆ ಫ್ಯಾಕ್ಟ್ ಚೆಕ್ (fact check) ಘಟಕಗಳನ್ನು ಆರಂಭಿಸಲಾಗಿದೆ. ಆದರೂ ಫೇಕ್ ನ್ಯೂಸ್ ಗಳು ಹೆಚ್ಚಾಗುತ್ತಿವೆ. ಇಂತಹ ಸುದ್ದಿಗಳನ್ನು ತಡೆಯಲು ಕೈಗೊಳ್ಳುತ್ತಿರುವ ಕ್ರಮಗಳು ಸಾಲುತ್ತಿಲ್ಲ ಎಂದರು.

ಫೇಕ್ ನ್ಯೂಸ್ ತಡೆಗೆ ಕೃತಕ ಬುದ್ದಿಮತ್ತೆ (AI ತಂತ್ರಜ್ಞಾನ) ಬಳಸಿ. ಸ್ವಯಂ ಪ್ರೇರಿತ ದೂರುಗಳನ್ನು ಹೆಚ್ಚೆಚ್ಚು ದಾಖಲಿಸಿ. ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಅಷ್ಟೇ ಅಲ್ಲದೇ ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಪೂರ್ತಿ ನಿಂತಿಲ್ಲ. ಡ್ರಗ್ಸ್ ಮಾರೋರು ಯಾರು? ರೌಡಿಗಳು ಯಾರು? ರಿಯಲ್ ಎಸ್ಟೇಟ್ ಮಾಡೋರು ಯಾರು ಎನ್ನುವುದು ಆಯಾ ಠಾಣಾಧಿಕಾರಿಗಳಿಗೆ ಗೊತ್ತಿರುತ್ತೆ. ಆದರೂ ಯಾಕೆ ನಿಲ್ಲುತ್ತಿಲ್ಲ‌ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು