Tuesday, June 18, 2024

ಸತ್ಯ | ನ್ಯಾಯ |ಧರ್ಮ

ಮಹಾತ್ಮಾ ಗಾಂಧಿಗೆ ಅವಹೇಳನ : ಬಲಪಂಥೀಯ ಸಂಘಟಕ ಸಂಭಾಜಿ ಭಿಡೆ ವಿರುದ್ಧ ಪ್ರಕರಣ ದಾಖಲು

ಮಹಾತ್ಮಾ ಗಾಂಧಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಾರಣಕ್ಕೆ ಬಲಪಂಥೀಯ ಕಾರ್ಯಕರ್ತ ಸಂಭಾಜಿ ಭಿಡೆ ವಿರುದ್ಧ ಶನಿವಾರ ಪ್ರಕರಣ ದಾಖಲಿಸಿದ್ದಾರೆ, ಶುಕ್ರವಾರ ಕಾಂಗ್ರೆಸ್ ಈ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಒಂದು ದಿನದ ನಂತರ, ಸಂಭಾಜಿ ಭಿಡೆ ವಿರುದ್ಧ ಪ್ರಕರಣ ದಾಖಲಾಗಿದೆ.

ರಾಜಪೇತ್ ಪೊಲೀಸರು ಸಂಭಾಜಿ ಭಿಡೆ ವಿರುದ್ಧ IPC ಸೆಕ್ಷನ್ 153 ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕದಡಿದ ಆರೋಪ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುರುವಾರ ಅಮರಾವತಿ ಜಿಲ್ಲೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಶ್ರೀ ಶಿವ ಪ್ರತಿಷ್ಠಾನ ಹಿಂದೂಸ್ತಾನ್ ಸಂಘಟನೆಯ ಸಂಸ್ಥಾಪಕ ಸಂಭಾಜಿ ಭಿಡೆ ತಮ್ಮ ಭಾಷಣದಲ್ಲಿ ಮಹಾತ್ಮಾ ಗಾಂಧಿಯವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಶುಕ್ರವಾರ, ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕ ಬಾಳಾಸಾಹೇಬ್ ಥೋರಟ್ ಸಂಭಾಜಿ ಭಿಡೆ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಹಾಗೂ ಸಂಭಾಜಿ ಭಿಡೆ ಅವರು ಮಹಾತ್ಮಾ ಗಾಂಧೀಜಿ ಬಗ್ಗೆ ಆಡಿರುವ ಮಾತುಗಳು ಅತ್ಯಂತ ಕೆಳಮಟ್ಟದ್ದಾಗಿವೆ ಎಂದು ಆರೋಪಿಸಿದ್ದಾರೆ.

ಈ ಹಿಂದೆಯೂ ಸಹ ಸಂಭಾಜಿ ಭಿಡೆ ಅವರು ತಮ್ಮ ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಲ್ಲಿ ಬರುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ “ಸಂಭಾಜಿ ಭಿಡೆಯವರು ವಿಕೃತ ಮನಸ್ಥಿತಿ ಹೊಂದಿದ್ದಾರೆ. ರಾಷ್ಟ್ರಪಿತನ ಕುರಿತು ಅವರ ಹೇಳಿಕೆಗಳು ದೇಶದ ಜನರನ್ನು ಕಳವಳಕ್ಕೆ ದೂಡಿದೆ. ಅವರು ಪದೇ ಪದೇ ಈ ರೀತಿಯ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಾರೆ ಮತ್ತು ರಾಜಕೀಯ ಹಿತಾಸಕ್ತಿಗಳಿಗಾಗಿ ಅವರನ್ನು ಬೆಂಬಲಿಸುವವರು ಯಾರು ಎಂಬುದನ್ನು ಕಂಡುಹಿಡಿಯಬೇಕು. ಹಾಗೇ ಅವರ ವಿರುದ್ಧವೂ ಕಠಿಣ ಕ್ರಮವನ್ನು ಬಯಸುತ್ತೇವೆ ಎಂದು ಸಿಎಲ್ಪಿ ನಾಯಕ ನಾಯಕ ಬಾಳಾಸಾಹೇಬ್ ಥೋರಟ್ ಆಗ್ರಹಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು