Home ಬ್ರೇಕಿಂಗ್ ಸುದ್ದಿ Breaking News : ಯಡಿಯೂರಪ್ಪ ವಿರುದ್ಧ ಪೋಕ್ಸೋ (POCSO) ದಾಖಲು

Breaking News : ಯಡಿಯೂರಪ್ಪ ವಿರುದ್ಧ ಪೋಕ್ಸೋ (POCSO) ದಾಖಲು

0

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಮತ್ತು ಆಕೆಯ 17 ವರ್ಷದ ಮಗಳು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಸಹಾಯ ಪಡೆಯಲು ಫೆಬ್ರವರಿ 2 ರಂದು ತೆರಳಿದ್ದಾಗ ಲೈಂಗಿಕ ದೌರ್ಜನ್ಯದ ಘಟನೆ ನಡೆದಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಸದಾಶಿವನಗರ ಪೊಲೀಸರು ಗುರುವಾರ (ಮಾರ್ಚ್ 14) ತಡರಾತ್ರಿ ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (81) ವಿರುದ್ಧ 17 ವರ್ಷದ ಹೆಣ್ಣು ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ 2012 (POCSO) ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೋಕ್ಸೊ ಕಾಯ್ದೆಯ ಸೆಕ್ಷನ್ 8 ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 ಎ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂತ್ರಸ್ತೆಯ ಜೊತೆಗಿದ್ದ ತಾಯಿ ಗುರುವಾರ ಸಂಜೆ ಪೊಲೀಸರಿಗೆ ದೂರು ನೀಡಿದ್ದು, ಮಧ್ಯರಾತ್ರಿ ಪ್ರಕರಣ ದಾಖಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಫೆಬ್ರವರಿ 2, 2024 ರಂದು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಯ ಸಹಾಯ ಪಡೆಯಲು ತಾಯಿ ಮತ್ತು ಮಗಳು ಹೋಗಿದ್ದಾಗ ಈ ಲೈಂಗಿಕ ದೌರ್ಜನ್ಯದ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

You cannot copy content of this page

Exit mobile version