ಅಪಘಾತ ಪ್ರಕರಣದಲ್ಲಿ ಕೌಸಲ್ಯಾ ಸುಪ್ರಜಾ ರಾಮ ಖ್ಯಾತಿಯ ನಟ ನಾಗಭೂಷಣ್ ಬಂಧನ

ಬೆಂಗಳೂರು: ಅತಿವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಲಾಯಿಸಿ ದಂಪತಿಗೆ ಡಿಕ್ಕಿ ಹೊಡೆದು ಮಹಿಳೆಯ ಸಾವಿಗೆ ಕಾರಣರಾದ ಕನ್ನಡ ನಟ ನಾಗಭೂಷಣ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಶನಿವಾರ ಬೆಳಗ್ಗೆ 9.45ರ ಸುಮಾರಿಗೆ ಬೆಂಗಳೂರಿನ ವಸಂತಪುರ ಮುಖ್ಯರಸ್ತೆಯ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ನಾಗಭೂಷಣ್ ಅವರ ವಾಹನ ಡಿಕ್ಕಿ ಹೊಡೆದಿದೆ. ನಟ ಉತ್ತರಹಳ್ಳಿಯಿಂದ ಕೋಣನಕುಂಟೆ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಮಹಿಳೆ ಪ್ರೇಮಾ (48) ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮೃತಪಟ್ಟಿದ್ದಾರೆ. ಆಕೆಯ ಪತಿ ಕೃಷ್ಣ (58) ಅವರ ಕಾಲು, ತಲೆ ಮತ್ತು ಹೊಟ್ಟೆಯ ಮೇಲೆ ಗಂಭೀರ ಗಾಯಗಳಾಗಿವೆ. ಕಾರು ಡಿಕ್ಕಿ ಹೊಡೆದು ಗಾಯಗೊಂಡಿದ್ದ ದಂಪತಿಯನ್ನು ನಾಗಭೂಷಣ್ ಅವರೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಬಂದ ಸುದ್ದಿಯಂತೆ ನಾಗಭೂಷಣ ಅವರನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು