ಸಂಪುಟ ವಿಸ್ತರಣೆ ಅಂತಿಮ ನಿರ್ಧಾರ ಹೈಕಮಾಂಡ್‌ಗೆ – ಸತೀಶ್ ಜಾರಕಿಹೊಳಿ

ಬೆಳಗಾವಿ : ರಾಜ್ಯ ಸಚಿವ ಸಂಪುಟಕ್ಕೆ ಹೊಸ ಮುಖಗಳನ್ನು ಸೇರ್ಪಡೆಗೊಳಿಸಿದರೆ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠವಾಗುವುದರ ಜೊತೆಗೆ ಭವಿಷ್ಯದ ನಾಯಕತ್ವವೂ ರೂಪುಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು. ಬೆಳಗಾವಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ನಡೆದ ಸಭೆಯಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಸುದೀರ್ಘ ಚರ್ಚೆ ನಡೆದಿದೆ ಎಂದು ತಿಳಿಸಿದರು.

ರಾಜ್ಯ ಕಾಂಗ್ರೆಸ್ ನಾಯಕರು ಸಚಿವ ಸಂಪುಟ ವಿಸ್ತರಣೆ ಕುರಿತು ತಮ್ಮ ಅಭಿಪ್ರಾಯಗಳನ್ನು ಪಕ್ಷದ ಹೈಕಮಾಂಡ್‌ಗೆ ತಿಳಿಸಿದ್ದು, ಅಂತಿಮ ತೀರ್ಮಾನವನ್ನು ಕೇಂದ್ರ ನಾಯಕತ್ವವೇ ಕೈಗೊಳ್ಳಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಇನ್ನೊಂದು ಸ್ಥಾನ ನೀಡಬೇಕು ಎಂಬ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ ಜಾರಕಿಹೊಳಿ, ಜಿಲ್ಲೆಯ ರಾಜಕೀಯ ಪ್ರಾತಿನಿಧ್ಯವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ವಲಯದಲ್ಲಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ಸತೀಶ್ ಜಾರಕಿಹೊಳಿ ಅವರ ಈ ಹೇಳಿಕೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

Related Articles

ಇತ್ತೀಚಿನ ಸುದ್ದಿಗಳು