Home ಬ್ರೇಕಿಂಗ್ ಸುದ್ದಿ ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್’ಗೆ – ಮುಹೂರ್ತ ಫಿಕ್ಸ್

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್’ಗೆ – ಮುಹೂರ್ತ ಫಿಕ್ಸ್

ಚಿಕ್ಕಮಗಳೂರು: ಹಲವು ವರ್ಷಗಳಿಂದ ಬಾಕಿ ಇರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಕೊನೆಗೂ ಮುಹೂರ್ತ ಫಿಕ್ಸ್ ಮಾಡಿದೆ.

ಜಿಲ್ಲಾ ಹಾಗೂ ತಾಲೂಕು ಪಂಚಾಯ್ತಿ ಚುನಾವಣೆಗೆ ಸಂಬಂಧಿಸಿದಂತೆ ನಾಳೆಯೇ ಕರುಡು ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ್ ಖಂಡ್ರೆ ಅವರು ಬುಧವಾರ ಹೇಳಿದ್ದಾರೆ.

ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿಗಳ ಕ್ಷೇತ್ರ ಪುನರ್ ವಿಂಗಡಣೆ ಹಾಗೂ ಮೀಸಲು ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆಯೊಳಗೆ ಕರಡು ಅಧಿಸೂಚನೆ ಹೊರಬೀಳಲಿದೆ ಎಂದು ಸಚಿವರು ತಿಳಿಸಿದ್ದಾರೆ.

You cannot copy content of this page

Exit mobile version