Monday, October 7, 2024

ಸತ್ಯ | ನ್ಯಾಯ |ಧರ್ಮ

ದ್ವೇಷ ಭಾಷಣ: ಮಂಗಳೂರಿನ ಉಪನ್ಯಾಸಕನ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಭಾಷಣದಲ್ಲಿ ಅನ್ಯ ಧರ್ಮಕ್ಕೆ ನೋವುಂಟು ಮಾಡಿದ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪಡೆದಂತಹ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಇದೀಗ FIR ದಾಖಲಾಗಿರುವ ಘಟನೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ನಡೆದ ನವದಂಪತಿ ಸಮಾವೇಶದಲ್ಲಿ ಭಾಷಣ ಮಾಡಿದ್ದ ಡಾ.ಅರುಣ್ ಉಳ್ಳಾಲ್, ಇನ್ನೊಂದು ಧರ್ಮದ ವಿರುದ್ಧ ದ್ವೇಷ ಹುಟ್ಟುವ ರೀತಿಯಲ್ಲಿ ಮಾತನಾಡಿದ ಆರೋಪಕ್ಕೆ ಗುರಿಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು ಸೆನ್ ಪೊಲೀಸರು ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.

ನವದಂಪತಿ ಸಮಾವೇಶದಲ್ಲಿ ಬಾಷಣ ಮಾಡುತ್ತಾ ಹಿಂದುಗಳು ಹಿಂದು ಮಾಲಿಕತ್ವದ ಸಭಾಂಗಣದಲ್ಲೆ ಮದುವೆ ಆಗಬೇಕು. ಹಿಂದು ಮಾಲಿಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು. ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು. ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ ಎಂದು ಅರುಣ್ ಉಳ್ಳಾಲ್ ಅವರು ಹೇಳಿದ್ದರು.

ಇವರ ಈ ಒಂದು ಹೇಳಿಕೆಗೆ ಅನ್ಯ ಧರ್ಮೀಯ ಸಂಘಟನೆಗಳಿಂದ ವಿರೋಧದ ಬೆನ್ನಲ್ಲೇ ಧರ್ಮ ದ್ವೇಷದ ಭಾಷಣ ಮಾಡಿದ ಅರೋಪದಡಿ ಡಾ. ಅರುಣ್ ಉಳ್ಳಾಲ್ ವಿರುದ್ದ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 66(C) IT ACT AND 196, 351 (BNS), 2023 ರಂತೆ ಪ್ರಕರಣ ದಾಖಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page