ಬಿಜೆಪಿ ನಾಯಕ ಸಿಟಿ ರವಿ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್ ಮೂಲಕ ನಾಗರಿಕರ ನಡುವೆ ದ್ವೇಷ ಮತ್ತು ಶತ್ರುತ್ವವನ್ನು ಉತ್ತೇಜಿಸಿದ ಆರೋಪದ ಮೇಲೆ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಚಿಕ್ಕಮಗಳೂರಿನ ಚುನಾವಣಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ‘X’ ವೇದಿಕೆಯಲ್ಲಿನ ಪೋಸ್ಟ್ ಸಂಬಂಧ, ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳು, ಚಿಕ್ಕಮಗಳೂರು ಚುನಾವಣಾಧಿಕಾರಿಗಳು ಸಿ ಟಿ ರವಿ ವಿರುದ್ಧ ಜನತಾ ಪ್ರಾತಿನಿಧ್ಯ ಕಾಯ್ದೆ ಮತ್ತು 505(2) (ಹಗೆತನ, ದ್ವೇಷ ಅಥವಾ ಪ್ರಚೋದನೆಯನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.
ವಿವಿಧ ವರ್ಗಗಳ ನಾಗರಿಕರ ನಡುವೆ ದ್ವೇಷ ಮತ್ತು ವೈರತ್ವವನ್ನು ಉತ್ತೇಜಿಸಿದ ಆರೋಪದ ಮೇಲೆ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.