ಟಿವಿ ಚಾನಲ್ಲುಗಳಲ್ಲಿ ಕಾಣಿಸಿಕೊಳ್ಳುವ ಜ್ಯೋತಿ ಆನಂದ ಗುರೂಜಿ ಕಾರನ್ನು ಅಡ್ಡಗಟ್ಟಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿರುವ ಆರೋಪ ಕೇಳಿಬಂದಿದೆ. ಈ ಕುರಿತು ಬೆಂಗಳೂರಿನ ಚಿಕ್ಕಜಾಲ ಠಾಣೆಯಲ್ಲಿ ಆನಂದ ಗುರು ದೂರು ದಾಖಲಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಕೃಷ್ಣಮೂರ್ತಿ (A1) ಮತ್ತು ದಿವ್ಯಾ ವಸಂತ (A2) ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ಆನಂದ ಗುರು ತಮ್ಮ ದೂರಿನಲ್ಲಿ, “ಕೋರ್ಟ್‌ನಿಂದ ತಡೆಯಾಜ್ಞೆ ತಂದರೂ, ಆರೋಪಿಗಳು ‘ನಿಮ್ಮ ಸೆಕ್ಸ್ ವಿಡಿಯೋ ಇದೆ’ ಎಂದು ಪ್ರತಿದಿನ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ಇದಕ್ಕೆ ಸುಮ್ಮನಾಗದ ದುಷ್ಕರ್ಮಿಗಳು ನನ್ನ ಕಾರನ್ನು ಅಡ್ಡಗಟ್ಟಿ, ಅಶ್ಲೀಲ ಪದಗಳಿಂದ ನಿಂದಿಸಿದ್ದಾರೆ” ಎಂದು ಆರೋಪಿಸಿದ್ದಾರೆ.
ಸದ್ಯ ಚಿಕ್ಕಜಾಲ ಠಾಣೆ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆರೋಪಿ ದಿವ್ಯಾ ವಸಂತ ಈ ಹಿಂದೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದಳು. ಇಂದಿರಾನಗರದ ಬ್ಯೂಟಿ ಪಾರ್ಲರ್‌ನಲ್ಲಿ ಸ್ಟಿಂಗ್ ಆಪರೇಷನ್ ನಡೆಸಿ, ನಂತರ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡಿದ್ದಳು. ಪಾರ್ಲರ್ ಮಾಲೀಕರ ದೂರಿನ ಆಧಾರದ ಮೇಲೆ ಕೇರಳದಲ್ಲಿ ದಿವ್ಯಾ ವಸಂತನನ್ನು ಪೊಲೀಸರು ಬಂಧಿಸಿದ್ದರು.