ಬೆಂಗಳೂರು: ಮಹಿಳೆಯೊಬ್ಬರ ಮೇಲಿನ ಲೈಂಗಿಕ ಶೋಷಣೆಗೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಸಂಸದ ದೇವೇಂದ್ರಪ್ಪ ಅವರ ಪುತ್ರ ರಂಗನಾಥ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಬ್ಲ್ಯಾಕ್‌ಮೇಲ್ ಆರೋಪದ ಪ್ರತಿ ದೂರು ಕೂಡ ದಾಖಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಬೆಂಗಳೂರಿನ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೈಸೂರಿನ ಮಹಾರಾಜ ಕಾಲೇಜಿನ ಉಪನ್ಯಾಸಕ ರಂಗನಾಥ್ ವಿರುದ್ಧ ಪೊಲೀಸರು ಸೆಕ್ಷನ್ 420, 417 (ವಂಚನೆ), ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ರಂಗನಾಥ್ ಅವರು ಸಂತ್ರಸ್ತೆಯ ವಿರುದ್ಧ ಮೈಸೂರು ನಗರದ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತೆ 15 ಲಕ್ಷ ರೂ.ಗಾಗಿ ಖಾಸಗಿ ಫೋಟೋಗಳು ಮತ್ತು ವಿಡಿಯೋಗಳೊಂದಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾಳೆ ಎಂದು ಆರೋಪಿಸಿದ್ದಾರೆ.
ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಿಂದ ಆರೋಪಿ ಹಾಗೂ ಸಂತ್ರಸ್ತೆ ಇಬ್ಬರಿಗೂ ನೋಟಿಸ್ ಜಾರಿ ಮಾಡಲಾಗಿದ್ದು, ದಾಖಲೆಗಳು ಮತ್ತು ಸಾಕ್ಷ್ಯಗಳೊಂದಿಗೆ ಪೊಲೀಸರ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.
ಪೊಲೀಸರ ಪ್ರಕಾರ, ಆರೋಪಿಯು ಒಂದು ವರ್ಷದ ಹಿಂದೆ ಸಂತ್ರಸ್ತೆಯನ್ನು ಪಾರ್ಟಿಯೊಂದರಲ್ಲಿ ಭೇಟಿಯಾಗಿದ್ದನು ಮತ್ತು ಮದುವೆಯ ಭರವಸೆ ನೀಡಿ ಅವಳೊಂದಿಗೆ ದೈಹಿಕ ಅನ್ಯೋನ್ಯತೆಯನ್ನು ಬೆಳೆಸಿಕೊಂಡಿದ್ದನು. ಆದರೆ, ನಂತರ ನಂತರದ ದಿನಗಳಲ್ಲಿ ಆತ ಆಕೆಯಿಂದ ದೂರವಾಗಿದ್ದಾನೆ.
ಮೈಸೂರಿನ ವಿಜಯನಗರ ಪೊಲೀಸರು ಸಂತ್ರಸ್ತೆ ಹಾಗೂ ಮತ್ತೊಬ್ಬ ಶ್ರೀನಿವಾಸ್ ಎಂಬವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.