Tuesday, June 25, 2024

ಸತ್ಯ | ನ್ಯಾಯ |ಧರ್ಮ

ಅಶ್ಲೀಲ ಪೆನ್ ಡ್ರೈವ್ ಹಂಚಿಕೆ: ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಮೇಲೂ ಬಿತ್ತು FIR

ಹಾಸನದಲ್ಲಿ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಎಸ್ಐಟಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡನಿಗೆ FIR ದಾಖಲಿಸಿದ್ದಾರೆ. ಪ್ರಕರಣದಲ್ಲಿ ಮೊದಲಿನಿಂದಲೂ ಬಿಜೆಪಿ ಮುಖಂಡರ ಮೇಲೆ ಆರೋಪ ಇದ್ದರೂ ಎಲ್ಲೂ ಸಹ ದಾಖಲೆ ಸಮೇತ ಸಿಗದ ಹಿನ್ನಲೆಯಲ್ಲಿ ಸಿಕ್ಕಿರಲಿಲ್ಲ.

ಆದರೆ ಸಧ್ಯಕ್ಕೆ ಸಿಕ್ಕಿರುವ ದಾಖಲೆಯ ಆಧಾರದಲ್ಲಿ ಅಶ್ಲೀಲ ಪೆನ್ ಡ್ರೈವ್ ಹಂಚಿಕೆಗೆ ಸಂಬಂಧಿಸಿದಂತೆ ಮಾಜಿ ಶಾಸಕ ಪ್ರೀತಂ ಗೌಡನಿಗೂ ಎಸ್‌ಐಟಿ FIR ದಾಖಲಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಈ ಪ್ರಕರಣದಲ್ಲಿ ನೇರವಾಗಿ ಸಂತ್ರಸ್ತೆಯೇ ವಿಡಿಯೋ ಹಂಚಿಕೆ ಆರೋಪದಲ್ಲಿ ಹಾಸನ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ ಹೆಸರು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ, ಪ್ರೀತಂ ಗೌಡ ಸೇರಿದಂತೆ ಇತರ ಮೂವರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ A1 ಆರೋಪಿಯಾಗಿದ್ದರೆ A2 ಕಿರಣ್, A3 ಶರತ್ ಹಾಗೆಯೇ A4 ಆರೋಪಿಯಾಗಿ ಪ್ರೀತಂ ಗೌಡ ಅವರ ಹೆಸರು ಉಲ್ಲೇಖವಾಗಿದೆ.

ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧ ಪೆನ್‌ಡ್ರೈವ್ ಹಂಚಿಕೆ ಆರೋಪ ಕೇಳಿ ಬಂದಿತ್ತು. ಇದಕ್ಕೆ ಪೂರಕ ಎಂಬಂತೆ ಅವರ ಇಬ್ಬರ ಆಪ್ತರನ್ನು ಎಸ್‌ಐಟಿ ಬಂಧಿಸಿದೆ. ಇದೀಗ ಸಂತ್ರಸ್ತೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಪ್ರೀತಂ ಗೌಡ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ಸಂತ್ರಸ್ತೆಯೊಬ್ಬರ ಅಶ್ಲೀಲ ವಿಡಿಯೋಗಳನ್ನು ಹಂಚಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪ್ರಕರಣದ ದಾಖಲು ಮಾಡಿಕೊಳ್ಳಲಾಗಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಕಳೆದ 21 ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ತನಿಖೆ ನಡೆಸುತ್ತಿದೆ.

ಪೆನ್‌ಡ್ರೈವ್ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡ ಇದೆ ಎಂದು ಎಚ್‌ಡಿ ರೇವಣ್ಣ ಕುಟುಂಬ ಆರೋಪ ಮಾಡುತ್ತಿತ್ತು. ಆದರೆ ಇಲ್ಲಿ ನೇರವಾಗಿ ಬಿಜೆಪಿ ನಾಯಕ ಮಾಜಿ ಶಾಸಕ ಪ್ರೀತಂ ಗೌಡ ವಿರುದ್ಧವೇ ಕೂಗು ಕೇಳಿ ಬಂದಿದೆ.

Related Articles

ಇತ್ತೀಚಿನ ಸುದ್ದಿಗಳು