Monday, January 12, 2026

ಸತ್ಯ | ನ್ಯಾಯ |ಧರ್ಮ

ಮಹಿಳೆಗೆ ಅವಹೇಳನಕಾರಿ ಕಾಮೆಂಟ್ : ಬಿಜೆಪಿ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ಮೇಲೆ ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಬೆಂಬಲಿತ ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.

ಅವಹೇಳನಕಾರಿ ಕಮೆಂಟ್ ಮಾಡಿದ್ದಾರೆ ಎಂದು ಆರೋಪಿಸಿ ಆಗಸ್ಟ್ 24ರಂದು ಕಾಂಗ್ರೆಸ್ ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ದೂರು ದಾಖಲಿಸಿದ್ದರು. ಇದರ ಅಡಿಯಲ್ಲಿ ಐಪಿಸಿ ಸೆಕ್ಷನ್ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಸಿದ್ದರು.

ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್ ನಲ್ಲಿ ಪೋಸ್ಟ್ ವೊಂದನ್ನು ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಸೌಗಂಧಿಕಾ ರಘುನಾಥ್ ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು ಎಂದು ಹೇಳಿದ್ದರು.

ಇದಕ್ಕೆ ಪ್ರತಿಯಾಗಿ ಚಕ್ರವರ್ತಿ ಸೂಲಿಬೆಲೆ ‘ನಿನಗೆ ಎಲ್ಲಿ ಯಾಕೆ ಉರಿ ಬಂತೊ ಗೊತ್ತಿಲ್ಲ’ ಎಂದು ಚಕ್ರವರ್ತಿ ಸೂಲಿಬೆಲೆ ಅಸಭ್ಯವಾಗಿ ಕಮೆಂಟ್ ಹಾಕಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page