ಮಹಾರಾಷ್ಟ್ರದಲ್ಲಿ ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ವಿರುದ್ಧ ಎಫ್ಐಆರ್ ದಾಖಲು

ವಂಚನೆ ಆರೋಪ ಪ್ರಕರಣ ಸಂಬಂಧ ಮುಂಬೈನ ಅಂಬೋಲಿ ಪೊಲೀಸರು ನಟ ಧ್ರುವ ಸರ್ಜಾ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಧ್ರುವ ಸರ್ಜಾ ಈ ಕೂಡಲೇ ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ಎಫ್ಐಆರ್ ನಲ್ಲಿ ಸೂಚಿಸಿದ್ದಾರೆ.

ನಟ ಧ್ರುವ ಸರ್ಜಾ ಅವರು ನಿರ್ದೇಶಕರಿಂದ 3.15 ಕೋಟಿ ರೂ. ಪಡೆದು ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ ಐಆರ್ ದಾಖಲಾಗಿದೆ.

ಹೊಸ ಸಿನಿಮಾದ ಶೂಟಿಂಗ್ ಗೆ ಬರುವುದಾಗಿ 3.15 ಕೋಟಿ ಅಡ್ವಾನ್ಸ್ ಹಣ ಪಡೆದು ಶೂಟಿಂಗ್ ಗೆ ಬರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು