ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್‌ಗೆ ಸಂಕಷ್ಟ ಎದುರಾಗಿದೆ. ಕೊಲೆ ಪ್ರಕರಣದಲ್ಲಿ ಮಹತ್ವದ ಸಾಕ್ಷ್ಯಗಳನ್ನು ಆಧರಿಸಿ ಭೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಬಿಜೆಪಿ ಶಾಸಕ ಭೈರತಿ ಬಸವರಾಜ್ ಮತ್ತವರ ಬೆಂಬಲಿಗರೆಂದು ಗುರುತಿಸಿಕೊಂಡಿರುವ ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಬೆಂಗಳೂರಿನ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ನಿನ್ನೆ ಸಂಜೆಯ ವೇಳೆಗೆ ಮನೆ ಮುಂದೆ ನಿಂತಿದ್ದ ಬಿಕ್ಲು ಶಿವನ ಮೇಲೆ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದರು. ತುರ್ತು ಚಿಕಿತ್ಸೆಗೂ ಅವಕಾಶ ಸಿಗದೇ ಬಿಕ್ಲು ಶಿವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿದು ಸ್ಥಳಕ್ಕೆ ಡಿಸಿಪಿ ಡಿ.ದೇವರಾಜ, ಜಂಟಿ ಪೊಲೀಸ್ ಆಯುಕ್ತ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಘಟನೆ ಹಿನ್ನೆಲೆಯಲ್ಲಿ ಬಿಕ್ಲು ಶಿವು ತಾಯಿ ವಿಜಯಲಕ್ಷ್ಮೀ ಕಡೆಯಿಂದ ದೂರು ದಾಖಲಿಸಲಾಗಿದೆ. ದೂರಿನ ಅಡಿಯಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್, ಜಗದೀಶ್, ವಿಮಲ್, ಕಿರಣ್, ಅನಿಲ್ ವಿರುದ್ಧ ಎಫ್ ಐಆರ್ ದಾಖಲಾಗಿದೆ.