ಮದ್ದೂರು ಗಣೇಶ ವಿಸರ್ಜನೆ ವೇಳೆ ಉಂಟಾದ ಗಲಭೆಯಲ್ಲಿ ಮಹಿಳೆಯೊಬ್ಬರಿಗೆ ಪೊಲೀಸರು ಲಾಠಿ ರುಚಿ ತಿನ್ನಿಸಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿತ್ತು. ಅದರ ಬೆನ್ನಲ್ಲೇ ಆಕೆ ಮುಸ್ಲಿಮರ ಮೇಲೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಅವಹೇಳನಕಾರಿ ಪದ ಪ್ರಯೋಗ ಮಾಡಿದ್ದೂ ಸಹ ವೈರಲ್ ಆಗಿತ್ತು.
ಇದೀಗ ಮದ್ದೂರಿನಲ್ಲಿ ಲಾಠಿ ಏಟು ತಿಂದಿದ್ದ ಶಿವಪುರ ನಿವಾಸಿ ಜ್ಯೋತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮದ್ದೂರು ಠಾಣೆ ಪಿಐ ಶಿವಕುಮಾರ್ ನೀಡಿದ ದೂರುನ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಸಿಎಂ ಹಾಗೂ ಮುಸ್ಲಿಂರ ವಿರುದ್ಧ ಅವಹೇಳನಕಾರಿ ಹೇಳಿಕೆ, ಅನ್ಯಧರ್ಮದ ಬಗ್ಗೆ ಧಕ್ಕೆಯಾಗುವಂತೆ ಪದ ಬಳಕೆ, ಕೋಮುಗಳ ನಡುವೆ ವೈಮನಸ್ಸು ಉಂಟುಮಾಡುವ ಹೇಳಿಕೆ, ವೈರತ್ವ ಉತ್ತೇಜನ ನೀಡುವ ಆರೋಪದಡಿ ಕೇಸ್ ದಾಖಲಾಗಿದೆ.