Saturday, January 10, 2026

ಸತ್ಯ | ನ್ಯಾಯ |ಧರ್ಮ

ತೆಲಂಗಾಣ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ; ಕನಿಷ್ಠ 5 ಸಾವು

ತೆಲಂಗಾಣದಲ್ಲಿ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 5 ಜನರು ಮೃತಪಟ್ಟಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ವರದಿಯ ಪ್ರಕಾರ, ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ.

ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಜಿಲ್ಲೆಯ ಪಶಮೈಲರಾಮ್‌ನಲ್ಲಿರುವ ಸಿಚಾರ್ ರಾಸಾಯನಿಕ ಉದ್ಯಮದಲ್ಲಿ ಈ ಬೆಂಕಿ ಕಾಣಿಸಿಕೊಂಡ ಪರಿಣಾಮ ಈ ಬೆಂಕಿ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದ್ದು, ತೆಲಂಗಾಣ ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳುವಂತೆ, ಸ್ಫೋಟದಿಂದಾಗಿ ಸುಮಾರು 15 ರಿಂದ 20 ಜನರು ಗಾಯಗೊಂಡಿದ್ದಾರೆ.

ವರದಿಗಳ ಪ್ರಕಾರ, ಸ್ಥಳದಲ್ಲಿ 11 ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಲಾಗಿದ್ದು, ಅಗ್ನಿಶಾಮಕ ಕಾರ್ಯಾಚರಣೆ ನಡೆಯುತ್ತಿದೆ. ಸಿಲುಕಿರುವ ಕಾರ್ಮಿಕರನ್ನು ಹುಡುಕಲು ಸ್ಥಳದಲ್ಲಿ ರಕ್ಷಣಾ ಮತ್ತು ಶೋಧ ತಂಡಗಳನ್ನು ನಿಯೋಜಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page