Home ನಿಧನ ಸುದ್ದಿ ದೆಹಲಿಯ ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ; ಮೂವರು ಸಾ*ವು

ದೆಹಲಿಯ ಅಪಾರ್ಟ್ಮೆಂಟ್ ನಲ್ಲಿ ಬೆಂಕಿ ಅವಘಡ; ಮೂವರು ಸಾ*ವು

0

ದೆಹಲಿಯ ವಸತಿ ಸಮುಚ್ಚಯ (ಅಪಾರ್ಟ್ಮೆಂಟ್) ವೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮಕ್ಕಳು ಮತ್ತು ಅವರ ತಂದೆ ಮೃತಪಟ್ಟ ಬಗ್ಗೆ ವರದಿಯಾಗಿದೆ. ಆಕಸ್ಮಿಕವಾಗಿ ಹೊತ್ತಿದ ಬೆಂಕಿಯಿಂದ ತಪ್ಪಿಸಿಕೊಳ್ಳಲಾಗದೇ ಮೂವರು ಮೃತಪಟ್ಟಿದ್ದಾರೆ.

ಅಪಾರ್ಟ್ಮೆಂಟ್ ನಲ್ಲಿ ಏಕಾಏಕಿ ಹೊತ್ತಿದ ಬೆಂಕಿ 9ನೇ ಮಹಡಿಯಲ್ಲಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ತಂದೆ ಮತ್ತು ಇಬ್ಬರು ಮಕ್ಕಳು ಬೆಂಕಿಯಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟಿದ್ದಾರೆ. ಈ ವೇಳೆ ಇಬ್ಬರು ಮಕ್ಕಳು ಒಂಬತ್ತನೇ ಮಹಡಿಯಿಂದ ಕೆಳಗೆ ಹಾರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಂತರ, ಅವರ ತಂದೆ ಯಶ್ ಯಾದವ್ ಕೂಡ ಬಾಲ್ಕನಿಯಿಂದ ಹಾರಿ ಐಜಿಐ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ದೆಹಲಿಯ ದ್ವಾರಕಾದ ಸೆಕ್ಟರ್ 13 ರಲ್ಲಿರುವ ಬಹುಮಹಡಿ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಮಂಗಳವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಎಂಟು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಪ್ರಯತ್ನಗಳು ನಡೆಯುತ್ತಿವೆ.

You cannot copy content of this page

Exit mobile version