ಕರ್ಬಿ ಆಂಗ್ಲಾಂಗ್( ಅಸ್ಸಾಂ): ಅಸ್ಸಾಂ-ನಾಗಾಲ್ಯಾಂಡ್ ಗಡಿಯಲ್ಲಿರುವ ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯ ಬೊಕಾಜನ್ ಬಳಿಯ ಲಾಹೋರಿಜಾನ್ ಪ್ರದೇಶದಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತದಲ್ಲಿ, ಸುಮಾರು 100 ಮನೆಗಳು ಮತ್ತು ಅಂಗಡಿಗಳು ಸುಟ್ಟು ಕರಕಲಾಗಿರು ಘಟನೆ ಬುಧವಾರ ನಡೆದಿದೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾಹಿತಿ ನೀಡಿರುವ ಬೊಕಾಜನ್ನ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್ಡಿಪಿಒ) ಜಾನ್ ದಾಸ್, ಸಿಲಿಂಡರ್‌ಗಳು ಸ್ಫೋಟಗೊಂಡಿರುವ ಕಾರಣ ಅವಘಡ ಸಂಭವಿಸಿದ್ದು, ಬೆಂಕಿಯಲ್ಲಿ ಒಂದು ನಾಲ್ಕು ಚಕ್ರದ ವಾಹನ ಮತ್ತು ಮೂರು ಮೋಟಾರ್ ಸೈಕಲ್ ಗಳು ಸಹ ಹಾನಿಗೀಡಾಗಿವೆ. ಅದೃಷ್ಟಕ್ಕೆ ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.
ಘಟನೆ ತಿಳಿದ ಕೂಡಲೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಪಿದ್ದು, ಸಿಬ್ಬಂದಿಗಳು ಬೆಂಕಿಯನ್ನು ನಂದಿಸುವಲ್ಲಿ ನಿರತರಾಗಿದ್ದು, ಅವಘಡದಲ್ಲಿ ಕನಿಷ್ಠ 100 ಮನೆಗಳು, ವ್ಯಾಪಾರ ಸಂಸ್ಥೆಗಳು ಮತ್ತು ಅಂಗಡಿಗಳಿಗೆ ಹಾನಿಯಾಗಿದೆ ಎಂದು ಹೇಳಿದ್ದಾರೆ.