ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: 9 ಮಂದಿ ಸಾವು

ಚೆನ್ನೈ: ತಮಿಳುನಾಡಿನಲ್ಲಿ ಮತ್ತೊಂದು ಭೀಕರ ಅಪಘಾತ ನಡೆದಿದೆ. ವಿರುದುನಗರ ಜಿಲ್ಲೆಯ ಕಮ್ಮಪಟ್ಟಿ ಗ್ರಾಮದ ಪಟಾಕಿ ಕಂಪನಿಯಲ್ಲಿ ಭಾರೀ ಸ್ಫೋಟ ಸಂಭವಿಸಿದೆ.

ಇದ್ದಕ್ಕಿದ್ದಂತೆ ಫ್ಯಾಕ್ಟರಿಯಲ್ಲಿ ಬೆಂಕಿ ಕಂಡುಬಂದಿದ್ದು ಸ್ಥಳೀಯರು ಕೂಡಲೇ ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಈ ಮಧ್ಯೆ ಕಾರ್ಖಾನೆಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.

ಅಗ್ನಿಶಾಮಕ ವಾಹನಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು. ಘಟನೆ ನಡೆದ ಸ್ಥಳದಿಂದ ಐದು ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ವರು ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ. ಇದೇ ವೇಳೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು