ಹೊಸದೆಹಲಿಯಿಂದ ಬಿಹಾರದ ದರ್ಭಾಂಗಕ್ಕೆ ತೆರಳುತ್ತಿದ್ದ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಕೆಲವು ಪ್ರಯಾಣಿಕರು ರೈಲಿನಿಂದ ಕೆಳಗೆ ಜಿಗಿದು ಪ್ರಾಣ ಉಳಿಸಿಕೊಂಡರು.
ಉತ್ತರ ಪ್ರದೇಶದ ಇಟಾವಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬುಧವಾರ ಸಂಜೆ ಹೊಸದೆಹಲಿ-ದರ್ಭಾಂಗ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಸ್ಲೀಪರ್ ಕೋಚ್‌ನಿಂದ ಹೊಗೆ ಬರುತ್ತಿರುವುದನ್ನು ಸರಾಯ್ ಭೂಪತ್ ಸ್ಟೇಷನ್ ಮಾಸ್ಟರ್ ಗಮನಿಸಿದ್ದಾರೆ. ಕೂಡಲೇ ಲೋಕೋ ಪೈಲಟ್‌ಗೆ ಮಾಹಿತಿ ನೀಡಿ ರೈಲನ್ನು ನಿಲ್ಲಿಸಲಾಯಿತು. ಕೋಚ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರು ಕೆಳಗೆ ಹಾರಿದ್ದಾರೆ.
ಸರಣಿ ರೈಲು ಅಪಘಾತಗಳು ಆತಂಕಕ್ಕೆ ಕಾರಣವಾಗಿವೆ. ಇತ್ತೀಚೆಗೆ ಹೊಸದಿಲ್ಲಿ-ದರ್ಭಾಂಗಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಉತ್ತರ ಪ್ರದೇಶದ ಇಟಾವಾ ಬಳಿ ರೈಲಿನಲ್ಲಿ ಅಗ್ನಿ ಅವಘಡದಲ್ಲಿ ಮೂರು ಬೋಗಿಗಳು ಸುಟ್ಟು ಕರಕಲಾಗಿವೆ. ಯುಪಿಯ ಇಟಾವಾ ಬಳಿಯ ಸರಾಯ್ ಭೂಪತ್ ನಿಲ್ದಾಣದ ಬಳಿ ಬುಧವಾರ ಸಂಜೆ ಈ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಹೊಸದೆಹಲಿ-ದರ್ಭಾಂಗ ಎಕ್ಸ್‌ಪ್ರೆಸ್ ಸರಾಯ್ ಭೂಪತ್ ನಿಲ್ದಾಣವನ್ನು ಹಾದುಹೋಗುವಾಗ ಸ್ಲೀಪರ್ ಕೋಚ್‌ನಿಂದ ಇದ್ದಕ್ಕಿದ್ದಂತೆ ಹೊಗೆ ಹೊರಹೊಮ್ಮಿತು. ಇದನ್ನು ಗಮನಿಸಿದ ಸ್ಟೇಷನ್ ಮಾಸ್ಟರ್ ಕೂಡಲೇ ರೈಲಿನ ಪೈಲಟ್ ಮತ್ತು ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಇದರಿಂದ ಸ್ಥಳದಲ್ಲೇ ರೈಲನ್ನು ನಿಲ್ಲಿಸಿದರು.
ರೈಲು ನಿಂತಾಗ ಪ್ರಯಾಣಿಕರೆಲ್ಲರೂ ಪ್ರಾಣ ಭಯದಿಂದ ಓಡಿದರು. ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರೈಲು ಸಂಪೂರ್ಣ ಹೊತ್ತಿ ಉರಿದಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ತನಿಖೆ ನಡೆಸಲಾಗುತ್ತಿದೆ. ಈ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.