Wednesday, July 30, 2025

ಸತ್ಯ | ನ್ಯಾಯ |ಧರ್ಮ

ದೀಪಾವಳಿಯಲ್ಲಿ ದಿನವಿಡೀ ಪಟಾಕಿ ಸಿಡಿಸುವಂತಿಲ್ಲ ; ರಾಜ್ಯ ಸರ್ಕಾರದಿಂದ ಬಂದಿದೆ ಹೊಸ ಆದೇಶ

ಮುಂಬರುವ ದೀಪಾವಳಿ ಹಬ್ಬದಲ್ಲಿ ದಿನವಿಡೀ ಪಟಾಕಿ ಸಿಡಿಸಿದರೆ ಬೀಳುತ್ತೆ ಕೇಸ್. ಹೌದು. ಹೀಗೊಂದು ಹೊಸ ನಿಯಮವನ್ನು ಸುಪ್ರೀಂಕೋರ್ಟ್ ಆದೇಶದ ಮೂಲಕ ರಾಜ್ಯ ಸರ್ಕಾರ ಜಾರಿ ಮಾಡಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ನಿರ್ದೇಶನ ಕೂಡ ಇದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಅದು ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ನಿರ್ದೇಶನವಿದೆ ಎಂದು ಹೇಳಿದರು.

ದೀಪಾವಳಿ ಎಂದರೆ ಕೇವಲ ಪಟಾಕಿ ಸಿಡಿಸುವುದಷ್ಟೇ ಅಲ್ಲ. ಕತ್ತಲೆಯಿಂದ ಬೆಳಕಿನತ್ತ ಹೋಗುವಾಗ ಪರಿಸರ ಮಾಲಿನ್ಯ ಬೇಡ. ಹಾಗೊಮ್ಮೆ ಸಿಡಿಸುವುದೇ ಆದರೆ ವಾಯುಮಾಲಿನ್ಯ ದೂರ ಮಾಡುವ ಹಸಿರು ಪಟಾಕಿ ಮಾತ್ರ ಸಿಡಿಸಬೇಕು. ಈ ಬಗ್ಗೆ ಪಟಾಕಿ ಮಾರಾಟಗಾರರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಹೇಳಿದರು.

ಪಟಾಕಿ ಸಿಡಿಸುವುದರಿಂದ ಅಪಾಯಗಳು ಸಂಭವಿಸುತ್ತವೆ. ಕೆಲವೆಡೆ ಜೀವಹಾನಿಯಾಗಿದೆ. ಮಕ್ಕಳು ಕಣ್ಣು ಕೂಡ ಕಳೆದುಕೊಂಡಿದ್ದಾರೆ. ಪಟಾಕಿ ಸಿಡಿಸುವುದರಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ ಎಂದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page