Monday, October 21, 2024

ಸತ್ಯ | ನ್ಯಾಯ |ಧರ್ಮ

ಜಮ್ಮು ಕಾಶ್ಮೀರದಲ್ಲಿ ಮತ್ತೆ ಮೊಳಗಿದ ಗುಂಡಿನ ದಾಳಿ ; 6 ಮಂದಿ ಕಾರ್ಮಿಕರ ಭೀಕರ ಹ*ತ್ಯೆ

ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಗಗಾಂಗೀರ್ನಲ್ಲಿ ಭಯೋತ್ಪಾದಕ ದಾಳಿಗೆ ಓರ್ವ ವೈದ್ಯ ಸೇರಿದಂತೆ 6 ಮಂದಿ ನಿರ್ಮಾಣ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ದಾಳಿಯ ತೀವ್ರತೆಗೆ ಸಾವುನೋವುಗಳ ಸಂಖ್ಯೆ ಹೆಚ್ಚಾಗಬಹುದು ಎಂದು ಮೂಲಗಳು ತಿಳಿಸಿವೆ.

ಸುರಂಗ ನಿರ್ಮಾಣದಲ್ಲಿ ತೊಡಗಿರುವ ಖಾಸಗಿ ಕಂಪನಿಯೊಂದರ ಕಾರ್ಮಿಕರನ್ನು ಹೊಂದಿರುವ ಕಾರ್ಮಿಕರ ಶಿಬಿರದ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶೇರ್-ಎ-ಕಾಶ್ಮೀರ್ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(SKIMS). ಸುರಂಗ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಆ ಜಾಗದಲ್ಲಿ ಈ ಕೃತ್ಯ ನಡೆದಿದೆ.

ಮೃತರನ್ನು ಡಾ.ಶಹನವಾಜ್, ಫಹೀಮ್ ನಜೀರ್, ಕಲೀಂ, ಮೊಹಮ್ಮದ್ ಹನೀಫ್, ಶಶಿ ಅಬ್ರೋಲ್, ಅನಿಲ್ ಶುಕ್ಲಾ ಮತ್ತು ಗುರ್ಮೀತ್ ಸಿಂಗ್ ಎಂದು ಗುರುತಿಸಲಾಗಿದೆ.

ಘಟನೆ ಬಗ್ಗೆ ಖಂಡನೆ ಮತ್ತು ಸಂತಾಪ ಸೂಚಿಸಿದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು, ನಿರಾಯುಧ ವ್ಯಕ್ತಿಗಳ ಮೇಲಿನ ಹಲ್ಲೆ ಭೀಕರ ಮತ್ತು ಹೇಡಿತನದ ಕೃತ್ಯ ಎಂದು ಬಣ್ಣಿಸಿದ್ದಾರೆ. ಮೃತರ ಕುಟುಂಬಗಳಿಗೆ ಮತ್ತು ಗಾಯಗೊಂಡವರ ಕುಟುಂಬಗಳಿಗೆ ತಮ್ಮ ಸಂತಾಪ ವ್ಯಕ್ತಪಡಿಸಿದ್ದು, ಈ ಪ್ರದೇಶದಲ್ಲಿ ಸ್ಥಳೀಯೇತರ ಕಾರ್ಮಿಕರಿಗೆ ನ್ಯಾಯ ಮತ್ತು ಹೆಚ್ಚಿನ ಭದ್ರತೆ ಕೈಗೊಳ್ಳಲು ಸೂಚಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page