ಅಪ್ರಾಪ್ತ ಗರ್ಭಿಣಿಯರ ಪ್ರಮಾಣ – ಬೆಂಗಳೂರಿಗೆ ಮೊದಲ ಸ್ಥಾನ

ಬೆಂಗಳೂರು: ರಾಜ್ಯದಲ್ಲಿ(State) 14 ರಿಂದ 18 ರಿಂದ ವರ್ಷದೊಳಗಿನ ಅಪ್ರಾಪ್ತ ವಯಸ್ಸಿನ ಬಾಲಕಿಯರು ಬಾಲಗರ್ಭಿಣಿಯರ(teenage Pregnant women) ಸಂಖ್ಯೆ 5975 ಇದೆ ಎಂದು ಸರ್ವೆಯಲ್ಲಿ ತಿಳಿದುಬಂದಿದೆ. ಇಂತಹ ಪ್ರಕರಣದಲ್ಲಿ ಬೆಂಗಳೂರು(Bengaluru) ನಂಬರ್‌ ಒನ್‌ ಆಗಿದೆ.

ಎಫ್‌ಐಆರ್‌ ದಾಖಲಿಸಿ ಮಕ್ಕಳ ರಕ್ಷಣಾ ನೀತಿ -2023 ಕುರಿತು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಅರಿವು ಮೂಡಿಸಲಾಗಿದೆ. . ಮಕ್ಕಳ ಪಾಲನಾ ಕೇಂದ್ರಗಳಲ್ಲಿ ದಾಖಲಾಗುವ ಬಾಲಗರ್ಭಿಣಿ/ ಬಾಲತಾಯಿ ಮತ್ತು ನವಜಾತ ಶಿಶುವಿಗೆ ಸಂಬಂಧಿಸಿದಂತೆ ಪಾಲಿಸಬೇಕಾದ ಕ್ರಮಬದ್ಧ ಕಾರ್ಯ ವಿಧಾನ (ಎಸ್‌ಒಪಿ) ಹೊರಡಿಸಲಾಗಿದೆ. 2024-25- 4746 ಪ್ರಕರಣಗಳು, 2025-26 – 1229 ಪ್ರಕರಣಗಳು ಕಂಡುಬಂದಿವೆ.

ರಾಜ್ಯದ ಶಾಲಾ-ಕಾಲೇಜು ವಸತಿ ನಿಲಯ ಹಾಗೂ ತರಬೇತಿ ಸಂಸ್ಥೆಗಳಲ್ಲಿ ಮಕ್ಕಳ ಹಕ್ಕುಗಳು ಬಾಲಗರ್ಭಿಣಿ ಪೊಕ್ಸ್ ಬಾಲ್ಯವಿವಾಹ ಹಾಗೂ ಮಕ್ಕಳ ಸಹಾಯವಾಣಿ-1098 ಮಕ್ಕಳಿಗೆ ಅರಿವು ಜಾಗೃತಿ ಮೂಡಿಸುವ ಕುರಿತು ವಿವಿಧ ಇಲಾಖೆಗಳು ನಿಗಾವಹಿಸಬೇಕಾದ ಆದ್ಯತೆಯ ಅಂಶಗಳ ಕುರಿತು 7 ಇಲಾಖೆಗಳಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ರಾಜ್ಯದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರು ಬಾಲಗರ್ಭಿಣಿಯರು ಆಗುವುದನ್ನು ತಡೆಗಟ್ಟಲು ಎಲ್ಲಾ ಭಾಗೀದಾರ ಇಲಾಖೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಹಂತಗಳಲ್ಲಿ ಸಾಮರ್ಥ್ಯಾಭಿವೃದ್ಧಿ ತರಬೇತಿ ನೀಡಲು ಯೋಜಿಸಲಾಗುತ್ತಿದೆ.

ಮಕ್ಕಳ ಸಹಾಯವಾಣಿ-1098 (24*7) ಕಾರ್ಯನಿರ್ವಹಿಸುತ್ತಿದೆ. ಸಂಕಷ್ಟದಲ್ಲಿರುವ ಮಗುವಿನ ಬಗ್ಗೆ ಯಾವುದೇ ಸಮಯದಲ್ಲಿ ಕರೆ ಸ್ವೀಕೃತವಾದರೂ ತಕ್ಷಣ ಮಗುವನ್ನು ರಕ್ಷಿಸಲು ಸಂಬಂಧಿಸಿದ ಅಧಿಕಾರಿಗಳು ಪ್ರವೃತ್ತರಾಗಿರುತ್ತಾರೆ. ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳು ಬಾಲಗರ್ಭಿಣಿಯರಾಗುವುದನ್ನು ಪರಿಣಾಮಕಾರಿಯಾಗಿ ಇಲಾಖೆಗಳಿಗೆ ನಿಗದಿಪಡಿಸಲಾಗಿದೆ. ಆಕಾಶವಾಣಿಯಲ್ಲಿ ಸರಣಿ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗಿದೆ. ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಸಾರ್ವಜನಿಕರಿಗೆ ಲಕ್ಷಾಂತರ ಹೆಚ್ಚಿನ ಭಾಗೀದಾರರು, ಅರಿವು ಶಾಲಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಪೋಷಣೆ ಅವಶ್ಯಕತೆ ಇರುವ ಮಕ್ಕಳ ಸುರಕ್ಷತೆ ಮತ್ತು ಪುನರ್ವಸತಿಗಾಗಿ ಪ್ರತಿಜಿಲ್ಲೆಯಲ್ಲೂ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ವಿಶೇಷ ಪೊಲೀಸ್ ಘಟಕ, ಮಕ್ಕಳ ಪಾಲನಾ ಸಂಸ್ಥೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಸಂತ್ರಸ್ಥ ಮಗುವಿಗೆ ಕಾನೂನು ಸಲಹೆ ಮತ್ತು ಆಪ್ತ ಸಮಾಲೋಚನೆಗಾಗಿ ಪ್ರತಿಜಿಲ್ಲೆಯಲ್ಲೂ ಬೆಂಬಲ ವ್ಯಕ್ತಿಗಳನ್ನು ಆಯ್ಕೆಮಾಡಿ ತರಬೇತಿ ನೀಡಲಾಗಿದೆ. Pradhan Mantri Jan Arogya Yojana (PM-JAY) ಅಡಿಯಲ್ಲಿ ವರ್ಷಕ್ಕೆ ರೂ.5.00 ಲಕ್ಷಗಳ ಆರೋಗ್ಯ ವಿಮೆಯನ್ನು ಸಂತ್ರಸ್ಥೆಗೆ ಮತ್ತು ಅವಳ ನವಜಾತ ಶಿಶುವಿಗೆ ನೀಡಲಾಗುವುದು.

Related Articles

ಇತ್ತೀಚಿನ ಸುದ್ದಿಗಳು