Home ರಾಜ್ಯ ಬಾಗಲಕೋಟೆ ಮೊದಲು ನರೇಂದ್ರ ಮೋದಿ ಮನೆಗೆ ಮುತ್ತಿಗೆ ಹಾಕಿ – ಸಿ.ಎಂ ಸಿದ್ದರಾಮಯ್ಯ

ಮೊದಲು ನರೇಂದ್ರ ಮೋದಿ ಮನೆಗೆ ಮುತ್ತಿಗೆ ಹಾಕಿ – ಸಿ.ಎಂ ಸಿದ್ದರಾಮಯ್ಯ

ಬಾಗಲಕೋಟೆ : ಗ್ಯಾಸ್ ಸಿಲಿಂಡರ್ ಅಭಾವ ಸರಿ ಮಾಡುವುದು ಕೇಂದ್ರದ ಕರ್ತವ್ಯ. ಆಟೋ ಚಾಲಕರು ನರೇಂದ್ರ ಮೋದಿಯವರ ಮನೆಗೆ (By Election) ಮುತ್ತಿಗೆ ಹಾಕಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು
ಬಾಗಲಕೋಟೆಯ ಉಪಚುನಾವಣೆ ಹಿನ್ನೆಲೆ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಅದು ಅವರ ಕರ್ತವ್ಯ. ರಾಜ್ಯ ಸರ್ಕಾರ ವಿತರಣೆ ಮಾಡುತ್ತದೆಯಷ್ಟೇ ಎಂದರು. ಆಟೋ ಚಾಲಕರು ಆಹಾರ ಸಚಿವರ ಮನೆಗೆ ಮುತ್ತಿಗೆ ಹಾಕುವುದಾಗಿ ಹೇಳಿದ್ದಾರೆ. ಆದರೆ ನರೇಂದ್ರ ಮೋದಿಯವರ ಮನೆಗೆ ಮುತ್ತಿಗೆ ಹಾಕಬೇಕು ಎಂದಿದ್ದಾರೆ.

ಸೋಮಣ್ಣ ಕಾಂಗ್ರೆಸ್ ಹೈ ಕಮಾಂಡ್ ಅಲ್ಲ
ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಗಳನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ ಹಾಗೂ ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ  ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ  ಹೇಳಿಕೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ ಎಂದರು. ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಅವರೇನು  ಕಾಂಗ್ರೆಸ್ ಹೈ ಕಮಾಂಡ್ ಅಲ್ಲ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು
ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲಿಚ್ಚಿಸುವುದಿಲ್ಲ.ಬಾಗಲಕೋಟೆ  ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿವೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಟಾಂಗ್‌ ಕೊಟ್ಟಿದ್ದಾರೆ

You cannot copy content of this page

Exit mobile version