ಸರ್ಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿ ಸಚಿವ ಪ್ರಿಯಾಂಕ್ ಖರ್ಗೆ ಸಿದ್ದರಾಮಯ್ಯನವರಿಗೆ ಬರೆದ ಪತ್ರದ ನಂತರ ಈಗ ಸಿದ್ದರಾಮಯ್ಯ ಈ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಆರ್‌ಎಸ್‌ಎಸ್ ಗೆ ಎಲ್ಲಾ ರೀತಿಯ ಅಂಕುಶ ಬೀಳುವ ಬಗ್ಗೆ ಬೆಳವಣಿಗೆ ಕಂಡುಬಂದಿದೆ.
ಸಚಿವ ಪ್ರಿಯಾಂಕ್ ಖರ್ಗೆ ಮನವಿ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಗೆ ಕಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ರವನ್ನು ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸಿ ಎಂದು ಸೂಚಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಬಹಿರಂಗವಾಗಿ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಸ್ ಗೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.
ತಮಿಳುನಾಡಿನಲ್ಲಿ RSS ಗೆ ಯಾವ ಕ್ರಮ ಕೈಗೊಳ್ಳಲಾಗಿದೆಯೋ, ಅದೇ ಮಾದರಿಯಲ್ಲಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್ ಗೆ ಸೂಚಿಸಿರೋದಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇತ್ತ ಮತ್ತೆ ಆರೆಸ್ಸೆಸ್ ವಿರುದ್ಧ ಸೆಟೆದು ನಿಂತ ಪ್ರಿಯಾಂಕ್ ಖರ್ಗೆ “ನಾನು ಆರೆಸ್ಸೆಸ್ ವಿರೋಧಿ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಿಜಿಸ್ಟರ್ ಆಗಿರುವ ಕಾಪಿ ತೋರಿಸಿ ಎಂದು ಅವಾಜು ಹಾಕಿರುವುದಲ್ಲದೆ, RSS ತೆಗೆದರೆ ಬಿಜೆಪಿನೇ ಇರಲ್ಲ ಎಂದಿದ್ದಾರೆ. ಆರೆಸ್ಸೆಸ್ ಚಟುವಟಿಕೆಗಳನ್ನ ನಿಮ್ಮ ಮನೆಯಲ್ಲಿ ಮಾಡಿಕೊಳ್ಳಿ ಅಂತಲೂ ತಿಳಿಸಿದ್ದಾರೆ.