Friday, October 10, 2025

ಸತ್ಯ | ನ್ಯಾಯ |ಧರ್ಮ

ಅಯೋಧ್ಯೆ: ನಿಗೂಢ ಸ್ಫೋಟಕ್ಕೆ ಮನೆ ಕುಸಿದು ಐದು ಮಂದಿ ಸಾವು

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಪಗ್ಲಾ ಭರಿ ಗ್ರಾಮದಲ್ಲಿ ಗುರುವಾರ ಸಂಭವಿಸಿದ ಸ್ಫೋಟದಿಂದಾಗಿ ಮನೆ ಕುಸಿದು ಐವರು ಸಾವಿಗೀಡಾಗಿದ್ದು, ಹಲವರು ಗಾಯಗೊಂಡಿದ್ದಾರೆ. ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಕಾರಣ ಈ ದುರಂತ ಸಂಭವಿಸಿರಬಹುದು ಎಂದು ಸ್ಥಳೀಯ ಅಧಿಕಾರಿ ದೇವೇಶ್ ಚತುರ್ವೇದಿ ತಿಳಿಸಿದ್ದಾರೆ.

ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಖಚಿತವಾಗಿಲ್ಲ. ಘಟನೆಯ ಬಗ್ಗೆ ಮಾಹಿತಿ ಲಭಿಸಿದ ತಕ್ಷಣವೇ, ಪೊಲೀಸ್, ಅಗ್ನಿಶಾಮಕ ದಳ ಮತ್ತು ಸ್ಥಳೀಯ ಅಧಿಕಾರಿಗಳ ತಂಡಗಳು ಸ್ಥಳಕ್ಕೆ ಧಾವಿಸಿವೆ.

“ಸ್ಫೋಟದಲ್ಲಿ ಐದು ಜನರು ಮೃತಪಟ್ಟಿದ್ದಾರೆ, ಮತ್ತು ಕೆಲವರು ಗಾಯಗೊಂಡಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿರುವವರನ್ನು ರಕ್ಷಿಸುವ ಪ್ರಯತ್ನಗಳು ಮುಂದುವರೆದಿವೆ” ಎಂದು ಮತ್ತೊಬ್ಬ ಅಧಿಕಾರಿ ಶೈಲೇಂದ್ರ ಸಿಂಗ್ ತಿಳಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಮನೆಗಳನ್ನು ಖಾಲಿ ಮಾಡಿಸಲಾಗಿದೆ. ಅಪಾಯದ ಸ್ಥಳದಿಂದ ದೂರವಿರುವಂತೆ ಅಧಿಕಾರಿಗಳು ಸ್ಥಳೀಯರಲ್ಲಿ ಮನವಿ ಮಾಡಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page