Monday, May 19, 2025

ಸತ್ಯ | ನ್ಯಾಯ |ಧರ್ಮ

ತಮಿಳುನಾಡಿನಲ್ಲಿ ಭೀಕರ ಅಪಘಾತ: ಮಗು ಸೇರಿದಂತೆ ಐದು ಮಂದಿ ಸಾವು

ಚೆನ್ನೈ: ತಮಿಳುನಾಡಿನ ತೂತುಕುಡಿಯಲ್ಲಿ ವ್ಯಾನ್ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಪರಿಣಾಮ ಮಗು ಸೇರಿದಂತೆ ಐದು ಜನರು ಸಾವಿಗೀಡಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನೀಡಿರುವ ವಿವರಗಳ ಪ್ರಕಾರ..

ತೂತುಕುಡಿ ಜಿಲ್ಲೆಯ ಮೀರಂಕುಲಂ ಗ್ರಾಮದ ಬಳಿ ಎಂಟು ಜನರು ಪ್ರಯಾಣಿಸುತ್ತಿದ್ದ ಓಮ್ನಿ ವ್ಯಾನ್ ರಸ್ತೆ ಬದಿಯ ಬಾವಿಗೆ ಬಿದ್ದಿದೆ. ವ್ಯಾನ್ ವಾಹನದ ಸಮೇತ ಮುಳುಗಿ ಒಂದು ಮಗು ಸೇರಿದಂತೆ ಐದು ಜನರು ಸಾವನ್ನಪ್ಪಿದ್ದಾರೆ. ಇತರ ಮೂವರು ಅಪಘಾತದಿಂದ ಪಾರಾಗಿದ್ದಾರೆ.

ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಸಂತ್ರಸ್ತರನ್ನು ಬಾವಿಯಿಂದ ಹೊರತೆಗೆದವು. ಅಪಘಾತದ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಸಿಎಂ ಸ್ಟಾಲಿನ್ ಸಂತಾಪ

ಅಪಘಾತದ ಬಗ್ಗೆ ತಮಿಳುನಾಡು ಸಿಎಂ ಸ್ಟಾಲಿನ್ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಆರ್ಥಿಕ ನೆರವು ಕೂಡ ಘೋಷಿಸಲಾಯಿತು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page