ನವದೆಹಲಿ : ಮೇಲ್ಸೇತುವೆಯನ್ನೇ ಬಂದ್ ಮಾಡುವಂತೆ ತಮ್ಮ ಕಾರುಗಳನ್ನು ಅಡ್ಡಾದಿಡ್ಡಿ ನಿಲ್ಲಿಸಿ ಬರ್ತಡೇ ಆಚರಿಸಿಕೊಂಡ ಸುಮಾರು 21 ಜನರನ್ನು ದೆಹಲಿಯ ಪೊಲೀಸರು ಬಂಧಿಸಿದ್ದಾರೆ.
ದೆಹಲಿಯ ಜಗತ್ ಪುರಿ ನಿವಾಸಿ ಅಂಶ್ ಕೊಹ್ಲಿ ಎಂಬ ಯುವಕ ತನ್ನ 21ನೇ ವರ್ಷದ ಹುಟ್ಟಿದ ಹಬ್ಬವನ್ನು ಸ್ನೇಹಿತರೊಂದಿಗೆ ಕೇಕ್ ಕತ್ತರಿಸಿ ಆಚರಿಸಿಕೊಂಡಿದ್ದಾನೆ. ಸ್ನೇಹಿತರೆಲ್ಲಾ ಸೇರಿ ದೆಹಲಿಯ ಫ್ಲೈ ಓವರ್ ಮೇಲೆ ತಮ್ಮ ಐಷಾರಾಮಿ ಕಾರುಗಳನ್ನು ತಂದು ಪ್ರಯಾಣಿಕರಿಗೆ ತೊಂದರೆಯಾಗುವಂತೆ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ್ದಾರೆ. ನಂತರ ಕಾರಿನ ಬಾನೆಟ್ ಮೇಲೆ ಕೇಕ್ ಅನ್ನು ಕತ್ತರಿಸಿ ಹಾಡುಗಳನ್ನು ಹಾಕಿ ನೃತ್ಯ ಮಾಡುತ್ತಾ ಹುಟ್ಟು ಹಬ್ಬವನ್ನು ಸಂಭ್ರಮಿಸಿದ್ದಾರೆ. ಈ ವೇಳೆ ತೊಂದರೆಗೆ ಒಳಗಾದ ಪ್ರಯಾಣಿಕರಿಗೆ ಅವಾಚ್ಯ ಶಬ್ದಗಳಿಂದ ಬೈದು ನಿಂದಿಸಿದ್ದಾರೆ ಎಂದು ಎಸ್ ಪಿ ಜ್ಞಾನೇಂದ್ರ ಸಿಂಗ್ ಹೇಳಿದ್ದಾರೆ.
ಈ ಹಿನ್ನಲೆ 21 ಜನರನ್ನು ದೆಹಲಿ ಪೊಲೀಸರು ಬಂಧಿಸಿದ್ದು ಎಂಟು ಐಷಾರಾಮಿ ಕಾರುಗಳನ್ನು ವಶಪಡಿಸಿಕೊಳ್ಳಾಲಾಗಿದೆ. ಮತ್ತು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಜ್ಞಾನೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ.
🔸 ಪೀಪಲ್ ಗ್ರೂಪ್ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
https://chat.whatsapp.com/G94DLKaJrsBH07M7DvkqRo
ಇದನ್ನು ನೋಡಿ : ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ ಭಾರತ ಐಕ್ಯತಾ ಯಾತ್ರೆ ಕರ್ನಾಟಕವನ್ನು ಪ್ರವೇಶಿಸುತ್ತಿದ್ದು, ಈ ಸಂಬಂಧ ಕಾಂಗ್ರೆಸ್ ಮುಖಂಡರು ಹಾಕಿದ್ದ ಹಿಂದಿ ಬ್ಯಾನರುಗಳಿಗೆ ಕರವೇ ಮುಖಂಡರು ಮಸಿ ಬಳಿದು, ಕನ್ನಡ ಬಳಸಲು ತಾಕೀತು ಮಾಡಿದರು. ಕರವೇ ಮೈಸೂರು ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ನೇತೃತ್ವದಲ್ಲಿ ಹಿಂದಿ ಬ್ಯಾನರುಗಳಿಗೆ ಮಸಿ ಬಳಿಯಲಾಯಿತು.