Saturday, December 7, 2024

ಸತ್ಯ | ನ್ಯಾಯ |ಧರ್ಮ

ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಪಾಲಿಸಿ: ಶಾಸಕ ಸ್ವರೂಪ್ ಪ್ರಕಾಶ್

ಹಾಸನ: ಬಾಬಾ ಸಾಹೇಬ್ ಅಂಬೇಡ್ಕರ್ ಅವರ ೬೩ನೇ ಪರಿನಿರ್ವಣ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ಸ್ಮರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಪ್ರತಿಮೆ ಹಾಗೂ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ನೆರವೇರಿಸಿದರು.

     ನಂತರ ಉದ್ದೇಶಿಸಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯುವ ಮೂಲಕ ಎಲ್ಲರೂ ಅವರ ತತ್ವ ಆದರ್ಶಗಳನ್ನು ಪಾಲಿಸೋಣ. ಭಾರತ ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡುವ ಮೂಲಕ ವಿಶ್ವಕ್ಕೆ ಮಾದರಿ ಯಾಗಿರುವ ಅಂಬೇಡ್ಕರ್ ಅವರು ಮಹಿಳೆಯರಿಗೆ, ದೀನ ದಲಿತರಿಗೆ ಸ್ವಾಭಿಮಾನದ ಬದುಕನ್ನು ಕಲ್ಪಿಸಿ ಕೊಟ್ಟಿದ್ದಾರೆ. ಬದುಕಿನುದ್ದಕ್ಕೂ ಎಲ್ಲರಿಗೂ ಸಮಾನತೆ ಕಲ್ಪಿಸಿಕೊಡಲು ಹೋರಾಟ ಮಾಡಿದ ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೊನೆಯ ದಿನಗಳಲ್ಲಿ ಈ ಹಿಂದೂ ಧರ್ಮ ತೇಜಿಸಿ ವಿಶ್ವಕ್ಕೆ ಶಾಂತಿ ಸಂದೇಶ ನೀಡಿದ ಬೌದ್ಧ ಧರ್ಮ ಸ್ವೀಕಾರ ಮಾಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದರು.

     ಈ ಸಂದರ್ಭದಲ್ಲಿ ಜೆಡಿಎಸ್ ವಕ್ತಾರ ಹೊಂಗೆರೆ ರಘು, ದಲಿತ ಮುಖಂಡ ಕೃಷ್ಣದಾಸ್, ಹೆಚ್.ಕೆ. ಸಂದೇಶ್, ಅರುಣ್ ಜಯರಾಮ್,  ಇತರರು ಉಪಸ್ಥಿತರಿದ್ದರು.

Related Articles

ಇತ್ತೀಚಿನ ಸುದ್ದಿಗಳು

You cannot copy content of this page